ETV Bharat / bharat

ಮಗನ ಪಕ್ಷಕ್ಕೆ ವಿಜಯಮ್ಮ ರಾಜೀನಾಮೆ: ಮಗಳ ಪಕ್ಷಕ್ಕೆ ಬೆಂಬಲಿಸುತ್ತೇನೆ ಎಂದು ಘೋಷಣೆ

author img

By

Published : Jul 8, 2022, 3:40 PM IST

ಜಗನ್​ಮೋಹನ್​ ರೆಡ್ಡಿ ಸಹೋದರಿ ಶರ್ಮಿಳಾ ತೆಲಂಗಾಣದಲ್ಲಿ ಹೊಸ ಪಕ್ಷ ಕಟ್ಟಿದ್ದಾರೆ. ಶರ್ಮಿಳಾ ಈ ನಿರ್ಧಾರವನ್ನು ಬೆಂಬಲಿಸಿ ತಾಯಿ ವಿಜಯಮ್ಮ ವೈಎಸ್​ಆರ್​​ ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ys-vijayamma-announce-to-resign-from-ysrcp-honorary-president-post
ವೈಎಸ್​ಆರ್​ ಕಾಂಗ್ರೆಸ್​​ ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ವಿಜಯಮ್ಮ ರಾಜೀನಾಮೆ ಘೋಷಣೆ

ಗುಂಟೂರು (ಆಂಧ್ರಪ್ರದೇಶ): ಆಂಧ್ರ ಪ್ರದೇಶದ ಆಡಳಿತಾರೂಢ ವೈಎಸ್​ಆರ್​ ಕಾಂಗ್ರೆಸ್​​ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ಹೊಂದಿದೆ. ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ವೈ.ಎಸ್.ವಿಜಯಮ್ಮ ಘೋಷಿಸಿದ್ದಾರೆ.

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಚಿನಕಾಕಣಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ವೈ.ಎಸ್.ವಿಜಯಮ್ಮ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ವೈ.ಎಸ್​.ಜಗನ್​ಮೋಹನ್​ ರೆಡ್ಡಿ ಅವರ ತಾಯಿ ಆಗಿರುವ ವಿಜಯಮ್ಮ, ನನ್ನಿಂದ ಯಾರಿಗೂ ಯಾವುದೇ ಅಭ್ಯಂತರ ಉಂಟಾಗಬಾರದು ಎಂದು ನಾನು ರಾಜೀನಾಮೆ ನೀಡುವ ನಿರ್ಣಯ ಮಾಡಿದ್ದೇನೆ. ಇದಕ್ಕಾಗಿ ನನ್ನನ್ನು ಕ್ಷಮಿಸಿ ಎಂದೂ ತಿಳಿಸಿದ್ದಾರೆ.

ಮಗಳು ಶರ್ಮಿಳಾಗೆ ಬೆಂಬಲ: ಜಗನ್​ಮೋಹನ್​ ರೆಡ್ಡಿ ಸಹೋದರಿ ಶರ್ಮಿಳಾ ತೆಲಂಗಾಣದಲ್ಲಿ ಹೊಸ ಪಕ್ಷ ಕಟ್ಟಿದ್ದಾರೆ. ಶರ್ಮಿಳಾ ಅವರ ಈ ನಿರ್ಧಾರವನ್ನು ಬೆಂಬಲಿಸಿ ತಾಯಿ ವಿಜಯಮ್ಮ ವೈಎಸ್​ಆರ್​​ ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.

ದಿ.ವೈ.ಎಸ್​.ರಾಜಶೇಖರ ರೆಡ್ಡಿ ಪತ್ನಿಯಾಗಿ ಮತ್ತು ಶರ್ಮಿಳಾ ತಾಯಿಯಾಗಿ ನಾನು ತೆಲಂಗಾಣದಲ್ಲಿ ಹೊಸ ಪಕ್ಷದ ಪರವಾಗಿ ನಿಲ್ಲುವ ಅವಶ್ಯಕತೆ ಇದೆ. ಇಂದು ಜಗನ್​ ಮತ್ತು ಶರ್ಮಿಳಾ ಬೇರೆ - ಬೇರೆ ಪಕ್ಷಗಳು ಮತ್ತು ರಾಜ್ಯಗಳನ್ನು ಪ್ರತಿನಿಧಿಸುವ ಅನಿರ್ವಾಯತೆ ಯಾಕೆ ಬಂದಿದೆ ಆ ದೇವರಿಗೆ ಗೊತ್ತು. ಕಷ್ಟದಲ್ಲಿದ್ದಾಗ ನಾನು ಜಗನ್​ ಜೊತೆಗಿದ್ದೆ, ಸಂತೋಷವಾಗಿದ್ದಲೂ ನಾನು ಆತನ ಜೊತೆಗಿದ್ದರೆ ನನ್ನ ಮಗಳು ಶರ್ಮಿಳಾಗೆ ಅನ್ಯಾಯ ಮಾಡುತ್ತಿದ್ದೇನೆ ಎಂದು ನನ್ನ ಮನಸಾಕ್ಷಿ ಹೇಳುತ್ತಿದೆ ಎಂದು ವಿಜಯಮ್ಮ ಹೇಳಿದ್ದಾರೆ.

ಇದನ್ನೂ ಓದಿ: 'ಮಹಾ' ಸಿಎಂ ಆಗಿ ಏಕನಾಥ್ ಶಿಂಧೆ ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.