ಕಾಸರಗೋಡು (ಕೇರಳ): ನಿನ್ನೆಯಷ್ಟೇ ಕೇರಳದಲ್ಲಿ ವಿಧಾನಸಭೆ ಚುನಾವಣೆ ಮುಗಿದಿದೆ. ಆದರೆ ರಾಜಕೀಯ ಜಂಜಾಟಗಳು ಇನ್ನೂ ಮುಗಿದಂತೆ ಕಾಣುತ್ತಿಲ್ಲ.

ಯುವ ಮೋರ್ಚಾ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಶ್ರೀಜಿತ್ ಪರಕ್ಕಲಾಯಿ ಮೇಲೆ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆಯಿಂದ ತೀವ್ರವಾಗಿ ಗಾಯಗೊಂಡಿರುವ ಶ್ರೀಜಿತ್ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಗೆ ಸಿಪಿಎಂ ಪಕ್ಷದ ಕಾರ್ಯಕರ್ತರು ಕಾರಣ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.