ಹೊಸಪೇಟೆ: ಮಂಡ್ಯ ಜಿಲ್ಲೆಯಲ್ಲಿ ನಡೆದ 12 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಎಲ್ಲಾ ಬಂಜಾರ ಮತ್ತು ಸಂಘಟನೆಗಳ ಹಾಗೂ ತಾಂಡಗಳ ನೇತೃತ್ವದಲ್ಲಿ ಹೊಸಪೇಟೆ ತಾಲೂಕಿನ ತಾಳೆಬಸಾಪುರ ತಾಂಡದಲ್ಲಿ ನೂರಾರು ಜನ ಪ್ರತಿಭಟನೆ ನಡೆಸಿದ್ದಾರೆ.
ಮದ್ದೂರು ತಾಲೂಕಿನ ಹುರುಗಲವಾಡಿ ಗ್ರಾಮದಲ್ಲಿ ಕಬ್ಬಿನ ಗದ್ದೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಕಾಮುಕರು ಬಳಿಕ ಬರ್ಬರವಾಗಿ ಕೊಂದಿದ್ದಾರೆ. ಬಡ ಕುಟುಂಬಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ರು.
ಇಂದು ಬಾಲಕಿಯ ಮೃತದೇಹವನ್ನು ಆ್ಯಂಬುಲೆನ್ಸ್ಲ್ಲಿಟ್ಟು ಪ್ರತಿಭಟನೆ ಮಾಡುತ್ತಿದಾರೆ. ಇದು ಸಾಮೂಹಿಕ ಅತ್ಯಾಚಾರ ಎಂದು ಕುಟುಂಬಸ್ಥರು ಆರೋಪಿಸಿದ್ದು, ಹಾಗೆ ಘಟನೆ ನಡೆದು ಮೂರು ದಿನ ಕಳೆದರೂ ಒಬ್ಬ ಆರೋಪಿಯನ್ನು ಮಾತ್ರ ಬಂಧಿಸಲಾಗಿದೆ, ಇನ್ನುಳಿದವರನ್ನು ಬಂಧಿಸಿಲ್ಲವೆಂದು ಆರೋಪಿಸಿದ್ದಾರೆ. ಕೂಡಲೇ ಉಳಿದ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಹಾಗೂ ಮೃತ ಬಾಲಕಿಯ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಹೊಸಪೇಟೆ ಉಪವಿಭಾಗಾಧಿಕಾರಿ ಶೇಖ್ ತನ್ವೀರ್ ಆಸೀಫ್ ಹಾಗೂ ತಹಶೀಲ್ದಾರ್ ಹೆಚ್.ವಿಶ್ವನಾಥ ಭೇಟಿ ನೀಡಿದ್ದಾರೆ.