ಬೆಳಗಾವಿ: ಬೆಳ್ಳಂಬೆಳಗ್ಗೆ ಕುಂದಾನಗರಿ ಬೆಳಗಾವಿಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿಯ ಉಪ ಮುಖ್ಯ ವಿದ್ಯುತ್ ಪರಿವೀಕ್ಷಕರ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಮಹತ್ವದ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಉಪಮುಖ್ಯ ವಿದ್ಯುತ್ ಪರಿವೀಕ್ಷಕ ಹನುಮಂತ ಚಿಕ್ಕಣ್ಣನವರ್ ಮನೆ ಮೇಲೆ ದಾಳಿಯಾಗಿದೆ.
ಬೆಳಗಾವಿಯ ಚನ್ನಮ್ಮ ನಗರದಲ್ಲಿರುವ ಹನುಮಂತ ಚಿಕ್ಕಣ್ಣನವರ್ ನಿವಾಸ, ಉಪಮುಖ್ಯ ವಿದ್ಯುತ್ ಪರಿವೀಕ್ಷಕರ ಕಚೇರಿ, ಚನ್ನಮ್ಮ ನಗರದಲ್ಲಿ ಮಗನ ಹೆಸರಿನಲ್ಲಿರುವ ಶಾಂತಿನಾಥ ಹೋಮ್ಸ್ ಅಪಾರ್ಟ್‌ಮೆಂಟ್ ಹಾಗೂ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಗೋಲಭಾಂವಿ ಗ್ರಾಮದ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಳಗಾವಿ ಉತ್ತರ ವಲಯ ಎಸಿಬಿ ತಂಡದಿಂದ ಪರಿಶೀಲನೆ ಮುಂದುವರಿದಿದೆ.