ETV Bharat / breaking-news

ಸಿ ಟಿ ರವಿ, ಡಿವಿಎಸ್ ಟೀಕೆಗೆ ಪ್ರತಿಕ್ರಿಯಿಸಲು ಸಮಯವಿಲ್ಲ ಎಂದ ಹೈಕೋರ್ಟ್ - HC says there is no time to respond

ನ್ಯಾಯಮೂರ್ತಿಗಳು ಸರ್ವಜ್ಞರಲ್ಲ ಎಂದಿದ್ದ ಸಿ ಟಿ ರವಿ ಹಾಗೂ ಲಸಿಕೆ ಉತ್ಪಾದನೆ ಆಗದಿದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ ಎಂದಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರ ಹೇಳಿಕೆಗಳ ಕುರಿತು ನ್ಯಾಯವಾದಿಗಳು ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಹೈಕೋರ್ಟ್​ ತನ್ನ ಅಭಿಪ್ರಾಯವನ್ನು ಹೇಳಿದೆ.

  HC says there is no time to respond about c t Ravi, DVS statement on the judiciary

author img

By

Published : May 20, 2021, 9:39 PM IST

ಬೆಂಗಳೂರು : ನ್ಯಾಯಾಂಗವನ್ನು ಟೀಕಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಗಳ ಕುರಿತು ಪ್ರತಿಕ್ರಿಯಿಸಲು ನ್ಯಾಯಾಲಯಕ್ಕೆ ಸಮಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳು ಸರ್ವಜ್ಞರಲ್ಲ ಎಂದಿದ್ದ ಸಿ ಟಿ ರವಿ ಹಾಗೂ ಲಸಿಕೆ ಉತ್ಪಾದನೆ ಆಗದಿದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ ಎಂದಿದ್ದ ಡಿ.ವಿ. ಸದಾನಂದಗೌಡರ ಹೇಳಿಕೆಗಳ ಕುರಿತು ನ್ಯಾಯವಾದಿಗಳು ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಜಿ.ಆರ್. ಮೋಹನ್ ಸೇರಿದಂತೆ ಕೆಲ ವಕೀಲರು ನ್ಯಾಯಾಂಗವನ್ನು ಟೀಕಿಸಿದ ಇಬ್ಬರೂ ಜನಪ್ರತಿನಿಧಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅಡಿ ಕ್ರಮ ಜರುಗಿಸುವಂತೆ ಕೋರಿ ಇ-ಮೇಲ್ ಮೂಲಕ ಮನವಿ ಮಾಡಿದ್ದರು.

ಈ ಕುರಿತು ವಿಚಾರಣೆ ವೇಳೆ ಪ್ರಸ್ತಾಪಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರು, ರಾಜಕಾರಣಿಗಳ ಟೀಕೆ ಬಗ್ಗೆ ಕ್ರಮಕ್ಕೆ ಕೆಲವರು ಇ-ಮೇಲ್ ಕಳುಹಿಸಿದ್ದಾರೆ. ನಮಗೆ ಈ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಸಮಯವಿಲ್ಲ ಎಂದರು. ಅಲ್ಲದೇ, ನಾವು ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇವೆ. ಎಲ್ಲರೂ ಸಂಯಮ ಕಾಯ್ದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟು ವಿವಾದಕ್ಕೆ ತೆರೆ ಎಳೆದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.