ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಒಂದೇ ದಿನ 7 ವರ್ಷದ ಗಂಡು ಮಗು ಸೇರಿ 12 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕಿತರ ಸಂಖ್ಯೆ ಈಗ 65ಕ್ಕೆ ಏರಿಕೆಯಾಗಿದೆ.
ಹನ್ನೆರಡು ಜನ ಕೊರೊನಾ ಸೋಂಕಿತರು ಸಹ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಅವರೆಲ್ಲರನ್ನೂ ಕ್ವಾರಂಟೈನ್ನಲ್ಲಿರಿಸಲಾಗಿತ್ತು. 65 ಸೋಂಕಿತರಲ್ಲಿ 28 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನುಳಿದ 37 ಜನ ಸೋಂಕಿತರು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.