1930 ರ ದಶಕದಲ್ಲಿ ಮೊದಲ ಬಾರಿಗೆ ಉತ್ಪಾದಿಸಲ್ಪಟ್ಟ ಅಮೆರಿಕನ್ ನಿರ್ಮಿತ ಅವಳಿ ಎಂಜಿನ್ ಪ್ರೊಪೆಲ್ಲರ್ ಪ್ಲೇನ್ ಡೌಗ್ಲಾಸ್ DC-3 ವಿಮಾನವು ಸ್ಯಾನ್ ಜೋಸ್ ಡೆಲ್ ಗುವಿಯಾರೆ ಮತ್ತು ವಿಲ್ಲವಿಸೆನ್ಸಿಯೊ ನಗರಗಳ ನಡುವೆ ಪತನಗೊಂಡಿದೆ.
ವಿಮಾನದಲ್ಲಿ ತರೈರಾ ಮುನಿಸಿಪಾಲಿಟಿ ಮೇಯರ್ ಡೊರಿಸ್ ವಿಲೆಗಾಸ್, ಆಕೆಯ ಗಂಡನ ಮತ್ತು ಮಗಳು, ವಿಮಾನದ ಮಾಲೀಕರು, ಪೈಲಟ್ ಜೈಮ್ ಕಾರಿಲ್ಲೊ, ಕೋ-ಪೈಲಟ್ ಜೈಮ್ ಹೆರೆರಾ ಮತ್ತು ಟೆಕ್ನಿಷನ್ ಸೇರಿ 12 ಜನ ಮೃತ ಪಟ್ಟಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ವಿಮಾನ ಹಾರುತ್ತಿರುವಾಗ ಎಂಜಿನ್ ಫೇಲ್ ಆಗಿದೆ. ಪೈಲಟ್ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ಅದು ವಿಫಲವಾಗಿದ್ದರಿಂದ ವಿಮಾನ ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಕುಟಂಬಗಳಿಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ.