ತುಮಕೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ನೀಡಲು ಅಗತ್ಯವಿರುವ ಆಕ್ಸಿಜನ್ ಕಾನ್ಸನ್ ಟ್ರೇಟರ್‌ಗಳನ್ನು ದಾನವಾಗಿ ನೀಡಲು ಸ್ವಯಂಸೇವಾ ಸಂಘಟನೆಗಳು, ಕ್ರಷರ್ ಮಾಲೀಕರು ಮುಂದೆ ಬಂದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕಿತರ ಚಿಕಿತ್ಸೆಗೆ ಜಿಲ್ಲೆಯ ಸಹಕಾರಿ ಸಂಸ್ಥೆಗಳು, ಉದ್ಯಮಿಗಳು ಸಹಾಯ ಹಸ್ತ ಚಾಚಿದ್ದಾರೆ. ಜಿಲ್ಲೆಯಲ್ಲಿ 1900 ಮಂದಿ ರೋಗಿಗಳಿಗೆ ಆಕ್ಸಿಜನ್ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನಷ್ಟು ಮಂದಿ ಸೋಂಕಿತರಿಗೆ ಆಕ್ಸಿಜನ್ ಚಿಕಿತ್ಸೆಯ ಅವಶ್ಯಕತೆ ಇದೆ. ಹೀಗಾಗಿ, 75,000 ರೂ. ಮೌಲ್ಯದ 250 ಆಕ್ಸಿಜನ್ ಕಾನ್ಸನ್ ಟ್ರೇಟರ್‌ಗಳನ್ನು ಖರೀದಿ ಮಾಡುತ್ತಿದ್ದೇವೆ ಎಂದರು.
ಆಕ್ಸಿಜನ್ ಕಾನ್ಸನ್ ಟ್ರೇಟರ್ ಬಳಸುವುದರಿಂದ ಇನ್ನೂ ಸುಮಾರು 200 ಜನರಿಗೆ ಆಕ್ಸಿಜನ್ ಸೌಲಭ್ಯ ನೀಡಬಹುದು ಎಂದು ಸಚಿವರು ತಿಳಿಸಿದರು.