ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ ರೋಗವು ತಂದ ಬಿಕ್ಕಟ್ಟಿನ ನಡುವೆಯೂ ಭಾರತೀಯ ರೈಲ್ವೆ ದೇಶಾದ್ಯಂತ ಪೂರೈಕೆ ಸರಪಳಿಗಳನ್ನು ನಿರಂತರವಾಗಿ ನಿರ್ವಹಿಸುತ್ತಿದೆ. ಅಗತ್ಯ ಸರಕುಗಳ ಚಲನೆ, ವೈದ್ಯಕೀಯ ಆಮ್ಲಜನಕ, ಇತ್ಯಾದಿ ದೇಶದ ವಿವಿಧ ಭಾಗಗಳಿಗೆ ಸರಬರಾಜು ಮಾಡುವ ಮೂಲಕ ಜನರಿಗೆ ಸಹಾಯ ಮಾಡಿದೆ.
ಕಳೆದ ಒಂದು ದಿನದಲ್ಲಿ ಮೂರು ಕಂಟೇನರ್ಗಳಲ್ಲಿ ಕರ್ನಾಟಕಕ್ಕೆ 437.1 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ರೈಲು ಮೂಲಕ ಕಳುಹಿಸಿಕೊಡಲಾಗಿದೆ.
20 ನೇ ಆಕ್ಸಿಜನ್ ಎಕ್ಸ್‌ಪ್ರೆಸ್ ನಿನ್ನೆ ರಾತ್ರಿ 8:25 ಕ್ಕೆ ಬೆಂಗಳೂರಿನ ವೈಟ್‌ಫೀಲ್ಡ್, ಒಳನಾಡಿನ ಕಂಟೈನರ್ ಡಿಪೋವನ್ನು ತಲುಪಿದೆ. ಇದು ಒಡಿಶಾದ ರೂರ್ಕೆಲಾದಿಂದ 30 ರಂದು ಸಂಜೆ 04.15 ಕ್ಕೆ ಲೋಡ್ ಆಗಿ ಪ್ರಯಾಣ ಬೆಳೆಸಿತ್ತು.
ಈ ಆಕ್ಸಿಜನ್ ಎಕ್ಸ್‌ಪ್ರೆಸ್ 4 ಕ್ರಯೋಜೆನಿಕ್ ಕಂಟೇನರ್‌ಗಳಿಂದ 85.07 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ಬೆಂಗಳೂರಿನ ವೈಟ್ ಫೀಲ್ಡ್ ನಿಲ್ದಾಣಕ್ಕೆ ಸಾಗಿಸಿದೆ.
21 ನೇ ಆಕ್ಸಿಜನ್ ಎಕ್ಸ್‌ಪ್ರೆಸ್ ಇಂದು ಬೆಳಿಗ್ಗೆ 02:40 ಕ್ಕೆ ಬೆಂಗಳೂರಿನ ವೈಟ್‌ಫೀಲ್ಡ್, ಒಳನಾಡಿನ ಕಂಟೈನರ್ ಡಿಪೋವನ್ನು ತಲುಪಿದೆ. ಇದು 30.ರಂದು ಜಾರ್ಖಂಡ್‌ನ ಟಾಟಾನಗರದಿಂದ ರಾತ್ರಿ 08.45 ಕ್ಕೆ ಪ್ರಾರಂಭವಾಗಿತ್ತು. ಈ ಆಕ್ಸಿಜನ್ ಎಕ್ಸ್‌ಪ್ರೆಸ್ 6 ಕ್ರಯೋಜೆನಿಕ್ ಕಂಟೇನರ್‌ಗಳಿಂದ 120 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ಬೆಂಗಳೂರಿಗೆ ಸಾಗಿಸಿದೆ.
22 ನೇ ಆಕ್ಸಿಜನ್ ಎಕ್ಸ್‌ಪ್ರೆಸ್ ಇಂದು ಬೆಳಗ್ಗೆ 08: 15 ಕ್ಕೆ ಬೆಂಗಳೂರಿನ ವೈಟ್‌ಫೀಲ್ಡ್, ಒಳನಾಡಿನ ಕಂಟೈನರ್ ಡಿಪೋವನ್ನು ತಲುಪಿದೆ. ಇದು ನಿನ್ನೆ ರಾತ್ರಿ 01.33 ಕ್ಕೆ ಮಹಾರಾಷ್ಟ್ರದ ರಾಯಗಢನಿಂದ ಪ್ರಾರಂಭವಾಗಿತ್ತು. ಈ ಆಕ್ಸಿಜನ್ ಎಕ್ಸ್‌ಪ್ರೆಸ್ 6 ಕ್ರಯೋಜೆನಿಕ್ ಕಂಟೇನರ್‌ಗಳಿಂದ 119.64 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ಸಾಗಿಸಿದೆ.
ಇಲ್ಲಿಯವರೆಗೆ ಕರ್ನಾಟಕವು ರೈಲ್ವೆ ಮೂಲಕ 2561.24 ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಪಡೆದಿದೆ. ಭಾರತೀಯ ರೈಲ್ವೆ ಇದುವರೆಗೆ 321 ಆಕ್ಸಿಜನ್ ಎಕ್ಸ್‌ಪ್ರೆಸ್‌ಗಳನ್ನು ನಡೆಸಿದೆ ಮತ್ತು 1304 ಟ್ಯಾಂಕರ್‌ಗಳಲ್ಲಿ 21939 ಟನ್‌ಗಳಷ್ಟು ದ್ರವ ವೈದ್ಯಕೀಯ ಆಮ್ಲಜನಕವನ್ನು ದೇಶಾದ್ಯಂತ ಸಾಗಿಸಿದೆ ಮತ್ತು ಕೋವಿಡ್ -19 ವಿರುದ್ಧದ ಹೋರಾಟದಲ್ಲಿ 15 ರಾಜ್ಯಗಳಿಗೆ ಪರಿಹಾರವನ್ನು ನೀಡಿದೆ.