ETV Bharat / briefs

'ಅತಿದೊಡ್ಡ ಜನಾದೇಶ ನಮ್ಮ ಜವಾಬ್ದಾರಿ ಹೆಚ್ಚಿಸಿದೆ'... ತವರು ರಾಜ್ಯದಲ್ಲಿ ಮೋದಿ ಸಾರ್ವಜನಿಕ ಭಾಷಣ

ಐದು ವರ್ಷದಲ್ಲಿ ಶ್ರೀಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ. ವಿಶ್ವಮಟ್ಟದಲ್ಲಿ ಭಾರತವನ್ನು ಉನ್ನತ ಹಂತಕ್ಕೆ ಕೊಂಡೊಯ್ಯುವ ಕಾರ್ಯವೂ ನಮ್ಮ ಮೇಲಿದೆ ಎಂದು ಮೋದಿ ಗುಜರಾತ್​​ನ ಅಹಮದಾಬಾದ್​​ನಲ್ಲಿ ತಿಳಿಸಿದ್ದಾರೆ.

ಮೋದಿ
author img

By

Published : May 26, 2019, 10:44 PM IST

ಅಹಮದಾಬಾದ್: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ನರೇಂದ್ರ ಮೋದಿ ತಮ್ಮ ತವರು ರಾಜ್ಯ ಗುಜರಾತ್​​ನಲ್ಲಿ ಮೊದಲ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ್ದಾರೆ.

ದೇಶದ ಜನತೆಯ ಈ ದೊಡ್ಡ ಆದೇಶ ಜವಾಬ್ದಾರಿಯನ್ನು ಹೆಚ್ಚಿಸಿದೆ. ಇನ್ನು ಐದು ವರ್ಷದಲ್ಲಿ ಶ್ರೀಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ. ಇದರ ಜೊತೆಯಲ್ಲಿ ವಿಶ್ವಮಟ್ಟದಲ್ಲಿ ಭಾರತವನ್ನು ಉನ್ನತ ಹಂತಕ್ಕೆ ಕೊಂಡೊಯ್ಯುವ ಕಾರ್ಯವೂ ನಮ್ಮ ಮೇಲಿದೆ ಎಂದು ಮೋದಿ ಗುಜರಾತ್​​ನ ಅಹಮದಾಬಾದ್​​ನಲ್ಲಿ ತಿಳಿಸಿದ್ದಾರೆ.

ಮೋದಿ ಸರ್ದಾರ್ ವಲ್ಲಭಭಾಯಿ ಪಟೇಲ್​​ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಗುಜರಾತ್ ಸಿಎಂ ವಿಜಯ್ ರೂಪಾಣಿ ಸ್ವಾಗತಿಸಿದರು. ಬಳಿಕ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಗುಜರಾತ್ ಸಿಎಂ ವಿಜಯ್ ರೂಪಾಣಿ ಕಾರಿನಲ್ಲಿ ವೇದಿಕೆಗೆ ತೆರಳಿದರು. ಈ ವೇಳೆ ಮಾರ್ಗದ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ನೆರೆದಿದ್ದರು.

ಸಾರ್ವಜನಿಕ ಭಾಷಣದ ಬಳಿಕ ನರೇಂದ್ರ ಮೋದಿ ತಮ್ಮ ತಾಯಿ ಹೀರಾಬೆನ್​​ರನ್ನು ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಮೋದಿ ತಮ್ಮ ತಾಯಿಯನ್ನು ಭೇಟಿ ಮಾಡಿದ್ದಾರೆ.

2014ರಲ್ಲಿ ಬಿಜೆಪಿ ಗುಜರಾತ್​​ನಲ್ಲಿ ಎಲ್ಲ 26 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿ ಆ ಎಲ್ಲ ಕ್ಷೇತ್ರಗಳನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಸಫಲವಾಗಿದೆ.

Intro:Body:

'ಅತಿದೊಡ್ಡ ಜನಾದೇಶ ನಮ್ಮ ಜವಾಬ್ದಾರಿ ಹೆಚ್ಚಿಸಿದೆ'... ತವರು ರಾಜ್ಯದಲ್ಲಿ ಮೋದಿ ಮೊದಲ ಸಾರ್ವಜನಿಕ ಭಾಷಣ

ಅಹಮದಾಬಾದ್: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ನರೇಂದ್ರ ಮೋದಿ ತಮ್ಮ ತವರು ರಾಜ್ಯ ಗುಜರಾತ್​​ನಲ್ಲಿ ಮೊದಲ ಸಾರ್ವಜನಿಕ ಭಾಷಣ ಉದ್ದೇಶಿಸಿ ಮಾತನಾಡಿದ್ದಾರೆ.

ದೇಶದ ಜನತೆಯ ಈ ದೊಡ್ಡ ಆದೇಶ ಜವಾಬ್ದಾರಿಯನ್ನು ಹೆಚ್ಚಿಸಿದೆ.  ಇನ್ನು ಐದು ವರ್ಷದಲ್ಲಿ ಶ್ರೀಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟನಿಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ. ಇದರ ಜೊತೆಯಲ್ಲಿ ವಿಶ್ವಮಟ್ಟದಲ್ಲಿ ಭಾರತವನ್ನು ಉನ್ನತ ಹಂತಕ್ಕೆ ಕೊಂಡೊಯ್ಯುವ ಕಾರ್ಯವೂ ನಮ್ಮ ಮೇಲಿದೆ ಎಂದು ಮೋದಿ ಗುಜರಾತ್​​ನ ಅಹಮದಾಬಾದ್​​ನಲ್ಲಿ ತಿಳಿಸಿದ್ದಾರೆ.

ಮೋದಿ ಸರ್ದಾರ್ ವಲ್ಲಭಭಾಯಿ ಪಟೇಲ್​​ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಗುಜರಾತ್ ಸಿಎಂ ವಿಜಯ್ ರೂಪಾಣಿ ಸ್ವಾಗತಿಸಿದರು. ಬಳಿಕ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಗುಜರಾತ್ ಸಿಎಂ ವಿಜಯ್ ರೂಪಾಣಿ ಕಾರಿನಲ್ಲಿ ವೇದಿಕೆ ತೆರಳಿದರು. ಈ ವೇಳೆ ಮಾರ್ಗದ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ನೆರೆದಿದ್ದರು.

2014ರಲ್ಲಿ ಬಿಜೆಪಿ ಗುಜರಾತ್​​ನಲ್ಲಿ ಎಲ್ಲ 26 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿ ಆ ಎಲ್ಲ ಕ್ಷೇತ್ರಗಳನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಸಫಲವಾಗಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.