ಮಾಸ್ಕೋ : ರಷ್ಯಾದ ಕಝಾನ್ ನಗರದ ಶಾಲೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಮಕ್ಕಳು ಸೇರಿದಂತೆ ಕನಿಷ್ಠ 9 ಜನರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಈಗಾಗಲೇ ಶಂಕಿತ ಒಬ್ಬಾತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಂಟು ಮಕ್ಕಳು ಹಾಗೂ ಓರ್ವ ಶಿಕ್ಷಕ ದಾಳಿಗೆ ಬಲಿಯಾಗಿದ್ದಾರೆ.
ಉಳಿದಂತೆ ಗಾಯಗೊಂಡ 10 ಜನರಲ್ಲಿ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ತಿಳಿಸಿದೆ.
ಇನ್ನು, ದಾಳಿಕೋರರಲ್ಲಿ 17 ವರ್ಷದ ಹದಿಹರೆಯದವನನ್ನು ವಶಕ್ಕೆ ಪಡೆಯಲಾಗಿದೆ. ಇನ್ನೋರ್ವ ಅಪರಾಧಿ ಇನ್ನೂ ಕಟ್ಟಡದಲ್ಲಿದ್ದಾನೆ ಎಂದು ಮೂಲಗಳು ತಿಳಿಸಿವೆ.
ದಾಳಿಕೋರರು ಸ್ಫೋಟ ನಡೆಸುವ ಉದ್ದೇಶದಿಂದ ಶಾಲೆಗೆ ಹೊಕ್ಕು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.