ETV Bharat / briefs

ಕೊರೊನಾಗೆ ಹೆದರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ - Covid suspect suicide news

ವಿಜಯಪುರ ನಗರದ ಜೋರಾಪುರ ಪೇಟೆಯ 57 ವರ್ಷದ ವ್ಯಕ್ತಿಯೊಬ್ಬರು ಕೊರೊನಾಗೆ ಹೆದರಿ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.

Suicide
Suicide
author img

By

Published : Jul 16, 2020, 3:06 PM IST

ವಿಜಯಪುರ: ಕೊರೊನಾ ಭಯದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಜೋರಾಪುರ ಪೇಟೆಯಲ್ಲಿ ನಡೆದಿದೆ.

57 ವರ್ಷದ ವ್ಯಕ್ತಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಅನಾರೋಗ್ಯದ ಕಾರಣದಿಂದ ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದನು. ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ತೆರಳಲು ವೈದ್ಯರು ಸೂಚಿಸಿದ್ದರು. ಆದರೆ ಕೋವಿಡ್ ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಮನೆಯಲ್ಲಿ ನಸುಕಿನ ಜಾವ ನೇಣಿಗೆ ಶರಣಾಗಿದ್ದಾನೆ.

ಕೊರೊನಾ ಬಂದಿದೆ ಎಂಬ ಭಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಇದರಿಂದ ಬಡಾವಣೆ ಜನತೆಯಲ್ಲಿ ಆತಂಕ ಮನೆಮಾಡಿದೆ. ಮೃತ ವ್ಯಕ್ತಿ ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ.

ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಎಂದು ವೈದ್ಯರು ಸಲಹೆ ನೀಡಿದ್ದರೂ ಸಹ ಆತನನ್ನು ಕುಟುಂಬದವರು ಮನೆಯಲ್ಲಿಯೇ ಇಟ್ಟುಕೊಂಡಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.