ETV Bharat / briefs

ಹೃದಯಾಘಾತ ಸಂಭವಿಸಿ ಬಸ್​ ನಿಲ್ದಾಣದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಶಿಕ್ಷಕ - election training

ಚುನಾವಣಾ ತರಬೇತಿ ಮುಗಿಸಿಕೊಂಡು ಮನೆಗೆ ವಾಪಸ್​ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತಕಕ್ಕೊಳಗಾಗಿ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಹೃದಯಾಘಾತ
author img

By

Published : Apr 11, 2019, 4:35 AM IST

ಮೈಸೂರು: ಚುನಾವಣೆಗೆ ನಿಯೋಜನೆಗೊಂಡಿದ್ದ ಶಿಕ್ಷಕರೊಬ್ಬರು ಹೃದಯಾಘಾತ ಸಂಭವಿಸಿ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಎಚ್.ಡಿ.ಕೋಟೆ ತಾಲ್ಲೂಕಿನ ಜಿನ್ನಹಳ್ಳಿ ಗ್ರಾಮದ ನಿವಾಸಿಯಾದ ಪುಟ್ಟಸ್ವಾಮಯ್ಯ (54) ಮೃತ ಶಿಕ್ಷಕ. ಚುನಾವಣಾ ತರಬೇತಿಗೆಂದು ಮಳವಳ್ಳಿಗೆ ತೆರಳಿ ವಾಪಸ್ ಬಂದು, ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಿಂದ ತಮ್ಮ ಸ್ವಗ್ರಾಮಕ್ಕೆ ಹೋಗುವುದಕ್ಕಾಗಿ ಬೇರೊಂದು ಬಸ್ ಹತ್ತಲು ಬಸ್​ನಿಂದ ಇಳಿಯುತ್ತಿದ್ದಾಗ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಅಂಶ ಮರಣೋತ್ತರ ಪರೀಕ್ಷೆಯಿಂದ ತಿಳಿದು ಬಂದಿದೆ. ಈ ಸಂಬಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು:ಚುನಾವಣೆಗೆ ನಿಯೋಜನೆಗೊಂಡಿದ್ದ ಶಿಕ್ಷಕ ಪುಟ್ಟಸ್ವಾಮಯ್ಯ(೫೪) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 
ಎಚ್.ಡಿ.ಕೋಟೆ ತಾಲ್ಲೂಕಿನ ಜಿನ್ನಹಳ್ಳಿ ಗ್ರಾಮದ ನಿವಾಸಿಯಾದ ಪುಟ್ಟಸ್ವಾಮಯ್ಯ ಅವರು ಚುನಾವಣಾ ತರಬೇತಿಗೆಂದು ಮಳವಳ್ಳಿಗೆ ತೆರಳಿ ವಾಪಸ್ ಬಂದು, ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಿಂದ ತಮ್ಮ ಸ್ವಗ್ರಾಮಕ್ಕೆ ಹೋಗಲು ಬೇರೆಂದು ಬಸ್ ಹತ್ತಲು ಇಳಿಯುತ್ತಿದ್ದಾಗ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಅಂಶ ಮರಣೋತ್ತರ ಪರೀಕ್ಷೆಯಿಂದ ತಿಳಿದು ಬಂದಿದೆ. 
ಮೃತರು ಈ ಹಿಂದೆ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಶಿಕ್ಷಕರಾಗಿ ಕಾರ್ಯ  ನಿರ್ವಹಿಸುತ್ತಿದ್ದರು. ಅಲ್ಲದೇ ತಮ್ಮ ಸ್ವಗ್ರಾಮದ ಮನೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಗ್ಲಿಷ್ ಭಾಷೆಯನ್ನು ಹೇಳಿ ಕೊಡುತ್ತಿದ್ದರು. ಇವರಿಂದ ಇಂಗ್ಲಿಷ್ ಕಲಿತ ಅನೇಕ ಮಂದಿ ಉನ್ನತ ಹುದ್ದೆಗಳನ್ನು ಗಳಿಸಿದ್ದಾರೆ. ಇವರ ಅಂತಿಮ ದರ್ಶನ ಪಡೆಯಲು ಶಿಷ್ಯವೃಂದ ಆಗಮಿಸಿತ್ತು. ಈ ಸಂಬಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ETV Bharat Logo

Copyright © 2025 Ushodaya Enterprises Pvt. Ltd., All Rights Reserved.