ಬೆಳಗಾವಿ : ಇಂಜಿನಿಯರಿಂಗ್ ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮುಖ್ಯದ್ವಾರದ ಎದುರು ಎಬಿವಿಪಿ ಕಾರ್ಯಕರ್ತರು ಪ್ರತಿಭಟಿಸಿದರು.
ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ರಾಜ್ಯದಲ್ಲಿ 14 ದಿನ ಕೊರೊನಾ ಕರ್ಪ್ಯೂ ಜಾರಿಗೊಳಿಸಿದೆ. ಬಸ್ ಸಂಚಾರವೂ ಇರುವುದಿಲ್ಲ.
ಪರೀಕ್ಷೆ ನಡೆಸಿದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬರುವುದಾದರೂ ಹೇಗೆ?. ಹೀಗಾಗಿ, ಇಂಜಿನಿಯರಿಂಗ್ ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿಗಳ ಜತೆಗೆ ವಿಟಿಯು ಕುಲಪತಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದ ಎಬಿವಿಪಿ ಕಾರ್ಯಕರ್ತರು, ಅವರ ವಿರುದ್ಧ ಘೋಷಣೆ ಕೂಗಿದರು.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಟಿಯು ಕುಲಪತಿ ಪ್ರೊ. ಕರಿಸಿದ್ದಪ್ಪ, ಪರೀಕ್ಷೆ ನಡೆಸಬೇಕೋ? ಬೇಡವೋ? ಎಂಬ ಬಗ್ಗೆ ಈವರೆಗೆ ಸರ್ಕಾರದಿಂದ ನಿರ್ದೇಶನ ಬಂದಿಲ್ಲ.
ಮೊದಲೇ ಪರೀಕ್ಷೆಗಳು ನಿಗದಿಯಾಗಿವೆ. ಪರೀಕ್ಷೆಗಳು ಮುಂದೂಡುವಂತೆ ಸರ್ಕಾರ ನಿರ್ದೇಶನ ನೀಡಿದ್ರೆ ಪರೀಕ್ಷೆ ಮುಂದೂಡುತ್ತೇವೆ. ಇಲ್ಲವಾದರೆ ಪರೀಕ್ಷೆ ನಡೆಸುತ್ತೇವೆ. ಸರ್ಕಾರದ ಗೈಡ್‌ಲೈನ್ಸ್‌ಗೆ ಕಾಯುತ್ತಿದ್ದೇವೆ ಎಂದರು.