ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಉಪನೋಂದಾಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ಉಪನೋಂದಣಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿ, ಜಮೀನು ನೋಂದಣಿಗಾಗಿ ರೈತರಿಂದ ಲಂಚ ವಸೂಲಿ ಮಾಡುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆ ಎಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದರು.