ಚಿಕ್ಕಮಗಳೂರು: ನಗರದ ಬಾಳೆಹೊನ್ನೂರು-ಜಯಪುರ ಸಮೀಪದ ಎವರ್ ಗ್ರೀನ್ ನರ್ಸರಿ ಬಳಿ ಕಾರು ಮತ್ತು ಬೈಕ್ ಮುಖಾಮುಖಿಯಾಗಿವೆ.
ಡಿಕ್ಕಿಯಾದ ರಭಸಕ್ಕೆ ಕಾರು ಪಕ್ಕದಲ್ಲೇ ಇದ್ದ ಹಳ್ಳಕ್ಕೆ ಜಾರಿದೆ. ಈ ಘಟನೆಯಲ್ಲಿ ಬೈಕ್ ಸವಾರ ಮಹಮ್ಮದ್ ಆಲಿ (25) ಎಂಬುವವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ವತ್ರೆಗೆ ದಾಖಲು ಮಾಡಲಾಗಿದೆ.
ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರಿನ ಚಾಲಕಿಯ ಅತಿಯಾದ ವೇಗವೆ ಈ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಬಾಳೆಹೊನ್ನೂರು ಪೋಲಿಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.