ಕೊರೊನಾ ಪ್ರಚೋದಿತ ಲಾಕ್ಡೌನ್ನಿಂದ ಸಿನಿಮಾ ಕ್ಷೇತ್ರ ಸಂಕಷ್ಟ ಅನುಭವಿಸುತ್ತಿದೆ. ಸಾವಿರಾರು ಸಿನಿಮಾ ಕಾರ್ಮಿಕರು ಕೆಲಸವಿಲ್ಲದೇ ಸಮಸ್ಯೆಗೀಡಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಕಲಾವಿದೆ ತಾರಾ ಅನುರಾಧಾ ಅವರು ಸಿಎಂರನ್ನು ಭೇಟಿಯಾಗಿ ವಿಶೇಷ ಪ್ಯಾಕೇಜ್ನಲ್ಲಿ ಸಿನಿಮಾ ರಂಗವನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಎನ್.ಎಂ.ಸುರೇಶ್ ಹಾಗೂ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಉಪಸ್ಥಿತರಿದ್ದರು.