ETV Bharat / briefs

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸರ್ಕಾರ ಇನ್ನಷ್ಟು ಗಟ್ಟಿ: ದಿನೇಶ್​​​ ಗುಂಡೂರಾವ್​​ - ದಿನೇಶ್ ಗುಂಡೂರಾವ್

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸರ್ಕಾರ ಮತ್ತಷ್ಟು ಗಟ್ಟಿಯಾಗಲಿದೆ. ಜೆಡಿಎಸ್​ ರಾಜ್ಯ ಘಟಕದ ಅಧ್ಯಕ್ಷ ಹೆಚ್​.ವಿಶ್ವನಾಥ್​ ಹೇಳಿಕೆ ಕೊಡುವ ಮುನ್ನ ಎಚ್ಚರಿಕೆ ವಹಿಸಲಿ ಎಂದು ಖಡಕ್​ ಆಗೇ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್.

ದಿನೇಶ್ ಗುಂಡೂರಾವ್
author img

By

Published : May 18, 2019, 5:28 PM IST

ಬೆಂಗಳೂರು: ಜವಾಬ್ದಾರಿ ಸ್ಥಾನದಲ್ಲಿ ಇರುವ ಹೆಚ್.ವಿಶ್ವನಾಥ್ ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ

ಬಿಜೆಪಿ ವಿರುದ್ಧದ ಪ್ರತಿಭಟನೆ ಬಳಿಕ‌ ಮಾತನಾಡಿದ ಅವರು, ಸಮನ್ವಯ ಸಮಿತಿ ಸಂಬಂಧ ಹೆಚ್.ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಹೆಚ್.ವಿಶ್ವನಾಥ್ ಬಗ್ಗೆ ನಾನು ಮಾತನಾಡುವುದು ಸರಿಯಲ್ಲ. ಅವರು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದಾರೆ. ಈ ಬಗ್ಗೆ ದೇವೇಗೌಡರು ಮತ್ತು ಕುಮಾರಸ್ವಾಮಿ ಗಮನ ಹರಿಸುವುದು ಒಳಿತು ಎಂದು ಸೂಚ್ಯವಾಗಿ ತಿಳಿಸಿದರು.

ಸರ್ಕಾರ ವಿಸರ್ಜನೆ ಮಾಡುವುದು ಉತ್ತಮ ಎಂಬ ಬಸವರಾಜ ಹೊರಟ್ಟಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೊರಟ್ಟಿ ಸಾಹೇಬ್ರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ, ನಮ್ಮ ಸರ್ಕಾರವಂತೂ ಫಲಿತಾಂಶ ಬಂದ ನಂತರ ಇನ್ನಷ್ಟು ಗಟ್ಟಿಯಾಗಿರುತ್ತದೆ. ಮೈತ್ರಿ ಸರ್ಕಾರಕ್ಕೆ ಇನ್ನಷ್ಟು ಬಲ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎರಡೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭಾರಿ ಅಂತರದ ಸೋಲು ಕಾಣಲಿದೆ. ಜತೆಗೆ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಸೋಲು ಅನುಭವಿಸಲಿದೆ. ಹೀಗಾಗಿ ಮೈತ್ರಿ ಸರ್ಕಾರ ಫಲಿತಾಂಶದ ಬಳಿಕ ಇನ್ನಷ್ಟು ಗಟ್ಟಿಯಾಗಲಿದೆ. ಬಸವರಾಜ್ ಹೊರಟ್ಟಿ ಹೇಳಿದಂತೆ ಯಾವ ಗೊಂದಲಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು.

Intro:Gundurao byteBody:KN_BNG_02_18_HVISHWANATH_GUNDURAOBYTE_SCRIPT_VENKAT_7201951

ಎಚ್.ವಿಶ್ವನಾಥ್ ಹೇಳಿಕೆ ಕೊಡುವಾಗ ಎಚ್ಚರಿಕೆಯಿಂದಿರಬೇಕು: ದಿನೇಶ್ ಗುಂಡೂರಾವ್

ಬೆಂಗಳೂರು: ಜವಾಬ್ದಾರಿ ಸ್ಥಾನದಲ್ಲಿ ಇರುವ ಎಚ್.ವಿಶ್ವನಾಥ್ ಹೇಳಿಕೆಗಳನ್ನು ಕೊಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟಾಂಗ್ ನೀಡಿದ್ದಾರೆ.

ಬಿಜೆಪಿ ವಿರುದ್ಧದ ಪ್ರತಿಭಟನೆ ಬಳಿಕ‌ ಮಾತನಾಡಿದ ಅವರು, ಸಮನ್ವಯ ಸಮಿತಿ ಸಂಬಂಧ ಎಚ್.ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಎಚ್.ವಿಶ್ವನಾಥ್ ಬಗ್ಗೆ ನಾನು ಮಾತನಾಡುವುದು ಸರಿಯಲ್ಲ. ಅವರು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದಾರೆ. ಈ ಬಗ್ಗೆ ದೇವೇಗೌಡರು ಮತ್ತು ಕುಮಾರಸ್ವಾಮಿ ಗಮನ ಹರಿಸುವುದು ಒಳಿತು ಎಂದು ಸೂಚ್ಯವಾಗಿ ತಿಳಿಸಿದರು.

ಸರ್ಕಾರ ವಿಸರ್ಜನೆ ಮಾಡುವುದು ಉತ್ತಮ ಎಂಬ ಬಸವರಾಜ ಹೊರಟ್ಟಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಸವರಾಜ್ ಹೊರಟ್ಟಿ ಸಾಹೇಬ್ರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ನಮ್ಮ ಸರ್ಕಾರವಂತೂ ಫಲಿತಾಂಶ ಬಂದ ನಂತರ ಇನ್ನಷ್ಟು ಗಟ್ಟಿಯಾಗಿರುತ್ತದೆ. ಮೈತ್ರಿ ಸರ್ಕಾರಕ್ಕೆ ಇನ್ನಷ್ಟು ಬಲ ಬರುತ್ತದೆ, ಗಟ್ಟಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎರಡೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭಾರಿ ಅಂತರದಲ್ಲಿ ಸೋಲು ಕಾಣಲಿದೆ. ಜತೆಗೆ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಸೋಲು ಅನುಭವಿಸಲಿದೆ. ಹೀಗಾಗಿ ಮೈತ್ರಿ ಸರ್ಕಾರ ಫಲಿತಾಂಶದ ಬಳಿಕ ಇನ್ನಷ್ಟು ಗಟ್ಟಿಯಾಗಲಿದೆ. ಬಸವರಾಜ್ ಹೊರಟ್ಟಿ ಹೇಳಿದಂತೆ ಯಾವ ಗೊಂದಲಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು.Conclusion:Venkat
ETV Bharat Logo

Copyright © 2025 Ushodaya Enterprises Pvt. Ltd., All Rights Reserved.