ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶದ ಮತ್ತಷ್ಟು ರಂಗೇರುತ್ತಿದ್ದು ಅಂಕಿ-ಅಂಶಗಳ ಹಾವು ಏಣಿ ಆಟ ನಡೆಯುತ್ತಿದೆ. ಘಟಾನುಘಟಿ ನಾಯಕರುಗಳ ಹಣೆಬರಹ ನಿರ್ಧಾರವಾಗಲಿದೆ.
ಎರಡು ಗಂಟೆಗಳ ಬಳಿಕ ಮತಎಣಿಕೆಯಲ್ಲಿ ಎನ್ಡಿಎ ಮೈತ್ರಿಕೂಟ ಬರೋಬ್ಬರಿ 303 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದರೆ, ಯುಪಿಎ 80 ಸೀಟುಗಳಲ್ಲಿ ಮುನ್ನಡೆ ಪಡೆದಿದೆ. ಇತರರು 100 ಕ್ಷೇತ್ರದಲ್ಲಿ ಮುಂದಿದ್ದಾರೆ.
ಗುಜರಾತ್ನ ಗಾಂಧಿನಗರ ಕ್ಷೇತ್ರದಲ್ಲಿ ಬಿಜೆಪಿಯ ಅಮಿತ್ ಶಾ 65 ಸಾವಿರ ಮತಗಳಿಂದ ಮುನ್ನಡೆ ಪಡೆದಿದ್ದಾರೆ. ವಾರಣಾಸಿಯಲ್ಲಿ ನರೇಂದ್ರ ಮೋದಿ 50 ಸಾವಿರ ಮತದಿಂದ ಮುನ್ನಡೆಯಲ್ಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 17 ಹಾಗೂ ಬಿಜೆಪಿ 16 ಕ್ಷೇತ್ರದಲ್ಲಿ ಮುನ್ನಡೆ ಪಡೆದಿದೆ. ಗುಜರಾತ್ನ 25 ಕ್ಷೇತ್ರ ಹಾಗೂ ರಾಜಸ್ಥಾನದ ಎಲ್ಲ ಸೀಟುಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.
ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ 23, ಮೈತ್ರಿ ಸರ್ಕಾರ 5 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಹೈವೋಲ್ಟೇಜ್ ಕ್ಷೇತ್ರವಾದ ಮಂಡ್ಯದಲ್ಲಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಪಡೆದಿದ್ದಾರೆ. ಬಾಗಲ ಕೋಟೆ,ಬಳ್ಳಾರಿ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಕಲ್ಬುರ್ಗಿ, ದಕ್ಷಿಣ ಕನ್ನಡ,ಉತ್ತರ ಕನ್ನಡದಲ್ಲಿ ಬಿಜೆಪಿ ಮುನ್ನಡೆ ಪಡೆದಿದೆ. ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಿನ್ನಡೆ ಅನುಭವಿಸುತ್ತಿದ್ದಾರೆ.