ಬೆಂಗಳೂರು: ಲಾಕ್‌ಡೌನ್ ವಿಸ್ತರಣೆ ಹಿನ್ನೆಲೆ ಸರ್ಕಾರಿ ನೌಕರರ ಕಚೇರಿ ಹಾಜರಾತಿ ಸಂಬಂಧ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.
ಅಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲ ಮಕ್ಕಳ ರಕ್ಷಣಾ ಸೇವೆಗಳನ್ನು ಒದಗಿಸುತ್ತಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ವರ್ಗದ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.
ನಗರಾಭಿವೃದ್ಧಿ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಇಂಧನ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ), ಆರ್ಥಿಕ ಇಲಾಖೆ, ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಕಾರ್ಯಕಾರಿ) ಮತ್ತು ಲೆಕ್ಕಪತ್ರ) ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿ ಶೇ.50 ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.