ಬೆಂಗಳೂರು : ಅಮೂಲ್ಯ ಲಿಯೋನ್ ವಿರುದ್ಧ ದಾಖಲಿಸಿರುವ ದೇಶದ್ರೋಹ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸುವಂತೆ ಕೋರಿ ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ, ವಿಭಾಗೀಯ ಪೀಠಕ್ಕೆ ವರ್ಗಾಯಿಸಿದೆ.
ಮಂಡ್ಯ ಮೂಲದ ವಕೀಲ ವಿಶಾಲ ರಘು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ ಈ ಕ್ರಮ ಕೈಗೊಂಡಿದೆ. ಅರ್ಜಿದಾರರು, ಪ್ರಕರಣದ ತನಿಖೆಯನ್ನು ಎನ್‌ಐಗೆ ವಹಿಸುವಂತೆ ಕೋರಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿರುವುದರಿಂದ ಈ ಅರ್ಜಿಯನ್ನು ದ್ವಿಸದಸ್ಯ ಪೀಠ ವಿಚಾರಣೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟು, ಅರ್ಜಿಯನ್ನು ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಲು ರಿಜಿಸ್ಟ್ರಾರ್ ಗೆ ಸೂಚಿಸಿದೆ.
ಪಿಐಎಲ್ ಕೋರಿಕೆ
ಅಮೂಲ್ಯ ವಿರುದ್ಧ ಪ್ರಕರಣ ದಾಖಲಿಸಿರುವ ಉಪ್ಪಾರಪೇಟೆ ಠಾಣೆ ಪೊಲೀಸರು ನಿಗದಿತ ಅವಧಿಯಲ್ಲಿ ತನಿಖಾ ವರದಿ ಮತ್ತು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಇದರಿಂದಲೇ ಆರೋಪಿ ಅಮೂಲ್ಯ, ಕಾನೂನಿನಲ್ಲಿ ಲಭ್ಯವಿರುವ ಅವಕಾಶ ಬಳಸಿಕೊಂಡು ಜಾಮೀನು ಪಡೆದುಕೊಂಡಿದ್ದಾಳೆ.
ತನಿಖಾಧಿಕಾರಿ, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳಿದ್ದರೂ ದೋಷಾರೋಪ ಪಟ್ಟಿ ಸಿದ್ದಪಡಿಸಿಲ್ಲ.
ಆದ್ದರಿಂದ, ತನಿಖಾಧಿಕಾರಿ ವಿರುದ್ಧ ಕ್ರಮ ಜರುಗಿಸಲು ಹಾಗೂ ಅಮೂಲ್ಯ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲು ಪ್ರಾಸಿಕ್ಯೂಷನ್ ಗೆ ನಿರ್ದೇಶಿಸಬೇಕು. ಅಮೂಲ್ಯ ಭಯೋತ್ಪಾದಕರ ಸಂಪರ್ಕ ಹೊಂದಿರುವ ಸಾಧ್ಯತೆ ಇದ್ದು ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಪ್ರಕರಣ ಹಿನ್ನೆಲೆ
ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಬಿಎ ಪತ್ರಿಕೋದ್ಯಮ ಓದುತ್ತಿದ್ದ ಅಮೂಲ್ಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಳು. ಈ ಹಿನ್ನೆಲೆಯಲ್ಲಿ ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.
ಅಮೂಲ್ಯ ವಿರುದ್ಧದ ದೇಶದ್ರೋಹ ಪ್ರಕರಣ : ವಿಭಾಗೀಯ ಪೀಠಕ್ಕೆ ವರ್ಗವಾದ ಅರ್ಜಿ - Amulyaleon Leon Pak pro slogan
ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪದಡಿ ಅಮೂಲ್ಯ ಲಿಯೋನ್ ವಿರುದ್ಧ ದಾಖಲಿಸಿರುವ ದೇಶದ್ರೋಹ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಕೋರಿ ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ, ವಿಭಾಗೀಯ ಪೀಠಕ್ಕೆ ವರ್ಗಾಯಿಸಿದೆ.