ಚಿಕ್ಕೋಡಿ: ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಹೊತ್ತಿದ ಪರಿಣಾಮ ಪ್ರಾಣಿಗಳು ಭಸ್ಮವಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದ ಹೊರವಲಯದ ತೋಟದಲ್ಲಿ ನಡೆದಿದೆ.
ಜೋಡಕುರಳಿ ಗ್ರಾಮದ ತೋಟದ ಮನೆಯಲ್ಲಿ ಅಪ್ಪಣ್ಣ ಪಾಟೀಲ್ ಎಂಬುವವರಿಗೆ ಸೇರಿದ ಜಾನುವಾರುಗಳಿಗೆ ಆಕಸ್ಮಿಕ ಬೆಂಕಿ ತಗುಲಿದರ ಪರಿಣಾಮ ಆಕಳು , 4 ಎಮ್ಮೆ, 4 ಕರು , 8 ಆಡು ಸಜೀವ ದಹನಗೊಂಡಿದ್ದು. ಇನ್ನು ಹಲವು ದನಕರುಗಳು ಗಾಯಗೊಂಡಿವೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಅಗ್ನಿ ನಂದಿಸುವಲ್ಲಿ ಯಶಸ್ವಿ ಆಗಿವೆ.