ಹುಬ್ಬಳ್ಳಿ: ಕೊರೊನಾದಿಂದ ಗುಣಮುಖರಾದ ಮಹಿಳೆಯೊಬ್ಬರು ಕಿಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೇ.23 ರಂದು ಕೋವಿಡ್ ಸೋಂಕು ದೃಢಪಟ್ಟಿದ್ದ ಹುಬ್ಬಳ್ಳಿ ಗಿರಣಿ ಚಾಳ ನಿವಾಸಿ (ಪಿ-1945) 49 ವರ್ಷದ ಮಹಿಳೆ ಸಂಪೂರ್ಣ ಗುಣಮುಖರಾಗಿದ್ದು, ನಗರದ ಕಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 45 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ. ಉಳಿದಂತೆ ಇನ್ನಿತರ ಕೊರೊನಾ ಸೋಂಕಿತರಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.