ETV Bharat / briefs

ಮಂಡ್ಯದಲ್ಲಿ ಮತ್ತೊಂದು ಕೊರೊನಾ ಪರೀಕ್ಷಾ ಕೇಂದ್ರ ಆರಂಭ - Mandya latest news

ಮಂಡ್ಯದ ನಾಗಮಂಗಲ ತಾಲೂಕಿನ ಬೆಳ್ಳೂಜರು ಬಳಿಯ ಆದಿ ಚುಂಚನಗಿರಿಯಲ್ಲಿ ಕೋವಿಡ್-19 ಪರೀಕ್ಷಾ ಲ್ಯಾಬ್ ಆರಂಭ ಮಾಡಲಾಗಿದ್ದು, ಇಂದು ಉದ್ಘಾಟನಾ ಸಮಾರಂಭ ನಡೆಯಿತು.

Mandya
Mandya
author img

By

Published : Jun 3, 2020, 8:36 PM IST

ಮಂಡ್ಯ: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಸಂಬಂಧ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪರೀಕ್ಷಾ ಕೇಂದ್ರವನ್ನು ಆರಂಭಿಸಲಾಗಿದೆ.

ನಾಗಮಂಗಲ ತಾಲೂಕಿನ ಬೆಳ್ಳೂಜರು ಬಳಿಯ ಆದಿ ಚುಂಚನಗಿರಿಯಲ್ಲಿ ಕೋವಿಡ್-19 ಪರೀಕ್ಷಾ ಲ್ಯಾಬ್ ಆರಂಭ ಮಾಡಲಾಗಿದ್ದು, ಇಂದು ಆದಿ ಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹಾಗೂ ಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟನೆ ನೆರವೇರಿಸಿದರು.

ಜಿಲ್ಲೆಯಲ್ಲಿ ಆರಂಭವಾಗಿರುವ ಎರಡನೇ ಪರೀಕ್ಷಾ ಕೇಂದ್ರ ಇದಾಗಿದೆ. ಈ ಮೊದಲು ಮಂಡ್ಯ ಮೆಡಿಕಲ್ ಕಾಲೇಜಿನಲ್ಲಿ ಲ್ಯಾಬ್ ಆರಂಭ ಮಾಡಲಾಗಿತ್ತು. ಈಗ ಮತ್ತೊಂದು ಲ್ಯಾಬ್ ಆರಂಭ ಮಾಡಿರುವುದು ಹೆಚ್ಚು ಹೆಚ್ಚು ಪರೀಕ್ಷೆ ನಡೆಸಲು ಅನುವಾಗಲಿದೆ ಎನ್ನಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.