ETV Bharat / briefs

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ಜಾಗೃತಿ ರಥಕ್ಕೆ ಚಾಲನೆ

author img

By

Published : Jun 13, 2020, 1:43 AM IST

ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಜೆ.ಸತೀಶ ಸಿಂಗ್ ಹಾಗೂ ಜಿಲ್ಲಾಧಿಕಾರಿ ಡಾ. ಎಸ್.ಬಿ ಬೊಮ್ಮನಹಳ್ಳಿ ಹಸಿರು ನಿಶಾನೆ ತೋರಿಸುವ ಮೂಲಕ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಗೃತಿ ರಥಕ್ಕೆ ಚಾಲನೆ ನೀಡಿದರು.

Anti child labor day
Anti child labor day

ಬೆಳಗಾವಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರಯುಕ್ತ ಜಾಗೃತಿ ರಥಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಜೆ.ಸತೀಶ ಸಿಂಗ್ ಹಾಗೂ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ, ವಿವಿಧ ಇಲಾಖೆಗಳು, ಕಾರ್ಮಿಕ ಸಂಘಗಳು ಹಾಗೂ ಸರ್ಕಾರೇತರ
ಸಂಸ್ಥೆಗಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಆರ್.ಜೆ. ಸತೀಶ ಸಿಂಗ್, ಕೊರೊನಾ ಹಿನ್ನೆಲೆಯಲ್ಲಿ ವಿಶೇಷ ಜಾಗೃತಿ ರಥದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿಯು ದೇಶದಲ್ಲಿ ಸಂಪೂರ್ಣವಾಗಿ ನಿರ್ಮೂಲನೆ ಆಗಬೇಕು. ‌ಆ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದರು.

ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ ಮಾತನಾಡಿ, ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರಯುಕ್ತ ಜಾಗೃತಿ ರಥಕ್ಕೆ ಚಾಲನೆ ನೀಡಿದ್ದೇವೆ. ಜಾಗೃತಿ ರಥವು ನಗರ ಪ್ರದೇಶ ಮತ್ತು ಬೆಳಗಾವಿ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಜೂ. 12ರಿಂದ 15 ರವರೆಗೆ ಸಂಚಾರ ಮಾಡಿ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.

ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ ಕುಮಾರ್, ಸಹಾಯಕ ಕಾರ್ಮಿಕ ಆಯುಕ್ತ ಡಿ.ಜಿ. ನಾಗೇಶ, ಕಾರ್ಮಿಕ ಅಧಿಕಾರಿಗಳಾದ ಮಲ್ಲಿಕಾರ್ಜುನ ಜೋಗುರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.