ಬಂಟ್ವಾಳ: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆಯ ಜನಜಾಗೃತಿ ಜಾಥಾಕ್ಕೆ ತಹಶೀಲ್ದಾರ್ ರಶ್ಮಿ ಎಸ್. ಆರ್. ಚಾಲನೆ ನೀಡಿದರು.
ಬಂಟ್ವಾಳ ಕಾರ್ಮಿಕರ ಇಲಾಖೆಯ ಕಾರ್ಮಿಕ ನಿರೀಕ್ಷಕಿ ಮೆರ್ಲಿನ್ ಗ್ರೇಸಿ ಅವರು ಮಾತನಾಡಿ, ಕೋವಿಡ್ ಭೀತಿಯ ಸಂದರ್ಭ ಮಕ್ಕಳನ್ನು ಬಾಲಕಾರ್ಮಿಕತೆಯಿಂದ ಮುಕ್ತವಾಗಿಸಲು ಹಿಂದಿಗಿಂತಲೂ ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಸಂಸ್ಥೆಗಳಲ್ಲಿ ಕೆಲಸಕ್ಕೆ ಇಡಬಾರದು ಮತ್ತು 15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವ್ಯಸ್ಥೆಯ ಮಕ್ಕಳನ್ನು ಅಪಾಯಕಾರಿ ಸಂಸ್ಥೆ (ಕಾರ್ಖಾನೆ) ಗಳಲ್ಲಿ ದುಡಿಸಿಕೊಳ್ಳಬಾರದು.
ಒಂದು ವೇಳೆ ದುಡಿಸಿಕೊಂಡಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಅಥವಾ ಕಾರ್ಮಿಕ ಇಲಾಖೆಗೆ ಕರೆ ಮಾಡುವಂತೆ ತಿಳಿಸಿದರು.
ಬಾಲ್ಯಾವಸ್ಥೆ, ಕಿಶೋರಾವಸ್ಥೆಯ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧ - ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಕಾರ್ಮಿಕ ಇಲಾಖೆಯ ವತಿಯಿಂದ ಬಂಟ್ವಾಳದಲ್ಲಿ ಜನಜಾಗೃತಿ ಜಾಥಾ ನಡೆಯಿತು.