ETV Bharat / briefs

ಮೆಟ್ರೋ ರೈಲು ಯೋಜನೆಯ 2ಎ ಮತ್ತು 2ಬಿ ಹಂತದ ಯೋಜನೆಗಳಿಗೆ ಅನುಮೋದನೆ - ನಮ್ಮ ಮೆಟ್ರೋ

ಕೇಂದ್ರ ಸರ್ಕಾರ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ 2ಎ ಮತ್ತು 2ಬಿ ಯೋಜನೆಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದ ಹಿನ್ನೆಲೆ ಇಂದು ಬೆಂಗಳೂರಿನ ಸಂಚಾರ ದಟ್ಟಣೆಯ ಕಡಿಮೆ ಮಾಡುವ ಮಹತ್ವದ ಯೋಜನೆಯಾಗಿರುವ ಮೆಟ್ರೋ ಎರಡು ಯೋಜನೆಗಳಿಗೆ ಅನುಮೋದನೆ ನೀಡಲಾಯಿತು..

CM BSY
CM BSY
author img

By

Published : May 10, 2021, 7:01 PM IST

ಬೆಂಗಳೂರು: ನಮ್ಮ ಮೆಟ್ರೋ ರೈಲು ಯೋಜನೆಯ 2ಎ ಮತ್ತು 2ಬಿ ಹಂತದ ಯೋಜನೆಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಮಹಾನಗರ ಯೋಜನಾ ಸಮಿತಿ ಸಭೆ ಅನುಮೋದನೆ ನೀಡಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ 2ಎ ಮತ್ತು 2ಬಿ ಯೋಜನೆಗಳಿಗೆ ಅನುಮೋದನೆ ಪಡೆಯಲು ಬೆಂಗಳೂರು ಮಹಾನಗರ ಯೋಜನಾ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ್, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ ಇ.ವಿ.ರಮಣ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚೆಗೆ ಕೇಂದ್ರ ಸರ್ಕಾರ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ 2ಎ ಮತ್ತು 2ಬಿ ಯೋಜನೆಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಂಚಾರ ದಟ್ಟಣೆಯ ಮಹತ್ವದ ಯೋಜನೆಯಾಗಿರುವ ಮೆಟ್ರೋ ಎರಡು ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

ಯೋಜನೆ ವಿವರ :

  • ಹಂತ -2 ಎ ಮೆಟ್ರೋ ಯೋಜನೆಯು, ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ವರೆಗೆ 20 ಕಿಮೀ ಮತ್ತು ಹಂತ -2 ಬಿ ಮೆಟ್ರೋ ಯೋಜನೆಯು ಕೆ.ಆರ್.ಪುರಂನಿಂದ ಹೆಬ್ಬಾಲ್ ಮೂಲಕ ವಿಮಾನ ನಿಲ್ದಾಣ ಟರ್ಮಿನಲ್ ವರೆಗೆ 38 ಕಿಮೀ ಒಟ್ಟು 58 ಕಿ.ಮೀ ಮತ್ತು 30 ನಿಲ್ದಾಣಗಳು ಒಳಗೊಂಡಿದೆ ಮತ್ತು ಬೆಂಗಳೂರು ನಗರದ ಪ್ರಮುಖ ಮೆಟ್ರೋ ಯೋಜನೆಯಾಗಿದೆ.
  • ಇದು ಹೊರವರ್ತುಲ ರಸ್ತೆ, ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಹೆಬ್ಬಾಳ ಉದ್ದಕ್ಕೂ ಇರುವ ದೊಡ್ಡ ಸಂಖ್ಯೆಯ ಐಟಿ ಕೈಗಾರಿಕೆಗಳಿಗೆ ಮತ್ತು ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ವಿಶ್ವಾಸಾರ್ಹ ಸುರಕ್ಷಿತ ಸಾರ್ವಜನಿಕ ಸಾರಿಗೆಯನ್ನು ಒದಗಿಸುತ್ತದೆ.
  • ರಾಜ್ಯ ಸರ್ಕಾರವು 2019ರ ಜನವರಿಯಲ್ಲಿ ಈ ಯೋಜನೆಗೆ ಅನುಮೋದಿಸಲಾಗಿದೆ ಮತ್ತು ಭಾರತ ಸರ್ಕಾರವು , 2021 ರ ಏಪ್ರಿಲ್ 28 ರಂದು 1,47,881ಕೋಟಿ ಮೊತ್ತಕ್ಕೆ ಅನುಮೋದನೆ ನೀಡಿದೆ.
  • ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಪ್ರಮುಖ ಭೂಸ್ವಾಧೀನ ಪ್ರಕ್ರಿಯೆಯನ್ನು ಮತ್ತು ಯುಟಿಲಿಟಿ ಸ್ಥಳಾಂತರಿಕೆ ಕಾಮಗಾರಿಯನ್ನು ಪೂರ್ಣಗೊಳಿಸಿದೆ ಮತ್ತು ಕಾಮಗಾರಿಗಳನ್ನು ಪ್ರಾರಂಭಿಸಲು ಸಿದ್ಧವಾಗಿದೆ, 58 ಕಿ.ಮೀ ಮೆಟ್ರೋ ಮಾರ್ಗವನ್ನು 5 ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಲು ಮತ್ತು ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.