ನವದೆಹಲಿ: ಬಿಜೆಪಿ ಆಡಳಿತದಲ್ಲಿ ಮೂರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದರೆ, ಯುಪಿಎ ಅಧಿಕಾರದಲ್ಲಿ ಆರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎನ್ನುವ ಕಾಂಗ್ರೆಸ್ ಹೇಳಿಕೆಗೆ ಸೇನೆಯ ಡೈರೆಕ್ಟರ್ ಜನರಲ್ ಪ್ರತಿಕ್ರಿಯೆ ನೀಡಿದ್ದಾರೆ.
ಯುಪಿಎ ಅಧಿಕಾರದಲ್ಲಿದ್ದಾಗ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಗ್ಗೆ ದಾಖಲೆಗಳಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ಸೇನೆಯ ಡೈರೆಕ್ಟರ್ ಜನರಲ್ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಸಾಮಾಜಿಕ ಕಾರ್ಯಕರ್ತನೋರ್ವ 2004ರಿಂದ 2014ರ ನಡುವೆ ಪಾಕಿಸ್ತಾನದ ಮೇಲೆ ನಡೆದ ಸೀಮಿತ ದಾಳಿಯ ಬಗ್ಗೆ ಮಾಹಿತಿ ನೀಡುವಂತೆ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗೆ ಸದ್ಯ ಉತ್ತರಿಸಿರುವ ಸೇನೆ, ಸೆಪ್ಟೆಂಬರ್ 29, 2016ರ ಮೊದಲು ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.