ಬಾಗಲಕೋಟೆ: ಜಿಲ್ಲೆಯಾದ್ಯಂತ ಜೂನ್ 18ರಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಜಿಲ್ಲೆಯಾದ್ಯಂತ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿದ್ದು, ಬಾಗಲಕೋಟೆ ತಾಲೂಕಿನಲ್ಲಿ 8, ಗುಳೇದಗುಡ್ಡದಲ್ಲಿ 1, ಬಾದಾಮಿ 3, ಹುನಗುಂದ 3, ಇಳಕಲ್ಲ 3, ಬೀಳಗಿ 4, ಮುಧೋಳ 5, ಜಮಖಂಡಿ 5 ಹಾಗೂ ರಬಕವಿ-ಬನಹಟ್ಟಿಯಲ್ಲಿ 5 ಪರೀಕ್ಷಾ ಕೇಂದ್ರಗಳಿವೆ. ಒಟ್ಟು 21,011 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ ಬೇರೆ ಜಿಲ್ಲೆಯ 707 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗೆ ಜಿಲ್ಲೆಯಾದ್ಯಂತ ಒಟ್ಟು 965 ಬ್ಲಾಕ್‍ಗಳನ್ನು ರಚಿಸಲಾಗಿದ್ದು, ಪ್ರತಿಯೊಂದು ಬ್ಲಾಕ್‍ಗಳನ್ನು ಸ್ಯಾನಿಟೈಸರ್ ಮಾಡಿಸಲಾಗಿದೆ. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಲಾಗಿದೆ.
ಅಲ್ಲದೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಬೇಕು. ಹಾಜರಾಗುವ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ಮಾಡಿ, ಸ್ಯಾನಿಟೈಸರ್ ಮಾಡಿ ಪರೀಕ್ಷಾ ಕೊಠಡಿಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ವಿದ್ಯಾರ್ಥಿಗಳು ಈಗಾಗಲೇ ನೀಡಿರುವ ಪ್ರವೇಶ ಪತ್ರವನ್ನು ತರಬೇಕು. ಹೊರ ಜಿಲ್ಲೆಯಿಂದ ಪರೀಕ್ಷೆಗೆ ಹಾಜರಾಗುವವರು ಹೊಸ ಪ್ರವೇಶ ಪತ್ರದ ಜೊತೆಗೆ ಹಳೆಯ ಪ್ರವೇಶ ಪತ್ರಗಳನ್ನು ಸಹ ತರಬೇಕು. ಇದೇ ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಬದಲಾವಣೆ ಇರುವದಿಲ್ಲ. ನಿಗದಿತ ಸಮಯದಲ್ಲಿಯೇ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಪಾಲಕರು ಮತ್ತು ಪೋಷಕರು ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ.
ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಸಹಾಯಕರನ್ನು ಸಹ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ
ಜಿಲ್ಲೆಯ ವಿವಿಧ ಭಾಗಗಳಿಂದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲಾಗುತ್ತಿದ್ದು, ಒಟ್ಟು 280 ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಹಳ್ಳಿಗಳಿಗೂ ಬಸ್ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಬೆಳಿಗ್ಗೆ 6 ಗಂಟೆಗೆ ತಮ್ಮ ತಮ್ಮ ವ್ಯಾಪ್ತಿಯಲ್ಲಿರುವ ಸಮೀಪದ ಬಸ್ ನಿಲ್ದಾಣದಲ್ಲಿ ಹಾಜರಿರಬೇಕು.
ಕೋವಿಡ್ ಕಾವಿನ ನಡುವೆ ಪಿಯುಸಿ ಪರೀಕ್ಷೆಗೆ ಬಾಗಲಕೋಟೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಜೂನ್ 18ರಂದು ನಡೆಯಲಿರುವ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ತಿಳಿಸಿದ್ದಾರೆ.