ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ 55 ವರ್ಷ ದಾಟಿರುವ ಪೊಲೀಸರನ್ನು ಕಂಟೈನ್ಮೆಂಟ್ ಝೋನ್ಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಬಾರದು ಎಂದು ಇತ್ತೀಚೆಗೆ ಕಮೀಷನರ್ ಭಾಸ್ಕರ್ ರಾವ್ ಸೂಚನೆ ನೀಡಿದ್ದರು.
ಇದಕ್ಕೆ ವ್ಯತಿರಿಕ್ತ ಎಂಬಂತೆ ಇದೀಗ ಯುವ ಪೊಲೀಸರಲ್ಲಿ ಅದರಲ್ಲೂ ಕೊರೊನಾ ನಿಯಂತ್ರಿತ ಪ್ರದೇಶಗಳಲ್ಲಿ ಕೆಲಸ ಮಾಡುವ ಯುವ ಪೊಲೀಸ್ ಸಿಬ್ಬಂದಿಗೂ ಕೊರೊನಾ ವೈರಸ್ ಕಾಣಿಸಿಕೊಂಡಿರುವುದು ಆತಂಕಕಾರಿಯಾಗಿದೆ.
ಇದುವರೆಗೂ ಬೆಂಗಳೂರು ನಗರ ಪೊಲೀಸ್ ಇಲಾಖೆಯ ಒಟ್ಟು 9 ಪೊಲೀಸ್ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿದ್ದರ ಪರಿಣಾಮ ತೀವ್ರ ಆತಂಕದಲ್ಲೇ ಪೊಲೀಸರು ಕೆಲಸ ಮಾಡುವಂತಾಗಿದೆ.
ನಗರದ ಸಿಟಿ ಮಾರ್ಕೆಟ್ ಠಾಣೆ, ಹೆಣ್ಣೂರು, ಶಂಕರಾಪುರಂ ಠಾಣೆ, ಜೆ.ಜೆ. ನಗರ, ಸೊಲದೇವನಹಳ್ಳಿ, ಫ್ರೇಜರ್ ಟೌನ್, ಚಾಮರಾಜ ಪೇಟೆ ಸಿಎಆರ್ ವಿಭಾಗದ ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು 9 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿತ್ತು.
ಈ ಪೈಕಿ ಐವರು ಗುಣಮುಖರಾಗಿದ್ದು, ಉಳಿದವರು ಕ್ವಾರಂಟೈನ್ ನಲ್ಲಿದ್ದಾರೆ. ಪೊಲೀಸರಲ್ಲಿ ಕೊರೊನಾ ಹೆಚ್ಚಾಗುತ್ತಿದ್ದಂತೆ ಕಂಟೈನ್ಮೆಂಟ್ ಝೋನ್ ಗಳಲ್ಲಿ ಕೆಲಸ ನಿರ್ವಹಿಸಲು ಒಪ್ಪುತ್ತಿಲ್ಲ. ಅಲ್ಲದೆ ಸೋಂಕು ಪತ್ತೆಯಾದ ಸಿಬ್ಬಂದಿ ಪೈಕಿ 30-35 ವಯಸ್ಸಿನವರೇ ಆಗಿರುವುದು ಮತ್ತಷ್ಟು ಭಯಕ್ಕೆ ಕಾರಣವಾಗಿದೆ.
ಮಹಾನಗರದ ಪೊಲೀಸರಲ್ಲಿ ಕಾಣಿಸಿಕೊಂಡ ಕೊರೊನಾ: ಖಾಕಿಗೆ ಕೋವಿಡ್ ಭೀತಿ
ಕೊರೊನಾ ವಾರಿಯರ್ಸ್ ಅಲ್ಲಿ ಪ್ರಮುಖ ಪಾತ್ರ ವಹಿಸಿರುವ ಪೊಲೀಸರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆ ಕಂಟೈನ್ಮೆಂಟ್ ಝೋನ್ ಗಳಲ್ಲಿ ಕೆಲಸ ನಿರ್ವಹಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ.