ಚಿಕ್ಕೋಡಿ : ವಾರದೊಳಗೆ ರಸ್ತೆ ನಿರ್ಮಾಣ ಮಾಡದೇ ಹೋದರೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ತಾಲೂಕಿನ ಬೆಳಗಲಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಸುಮಾರು 1500 ಜನ ಸಂಖ್ಯೆ ಇರುವ ನಾಗರಮುನ್ನೋಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳಗಲಿ ಗ್ರಾಮಕ್ಕೆ ಸಮರ್ಪಕ ರಸ್ತೆ ಸಂಪರ್ಕವಿಲ್ಲ. ಕಾರಣಾಂತರಗಳಿಂದ ಇದ್ದ ಒಂದು ರಸ್ತೆಯನ್ನು ಕೆಲ ರೈತರು ಬಂದ್ ಮಾಡಿದ್ದಾರೆ. ಇದರಿಂದ ಜನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಅಲ್ಲದೆ ಬರುವ ನಾಲ್ಕೈದು ದಿನಗಳಲ್ಲಿ ಹತ್ತನೆ ತರಗತಿ ಪರೀಕ್ಷೆ ಇದೆ. ರಸ್ತೆ ಬಂದ್ ಆಗಿರುವುದರಿಂದ ಗ್ರಾಮದ ಮಕ್ಕಳು ಪರೀಕ್ಷೆಯಿಂದ ವಂಚಿತವಾಗುತ್ತಾರೆಂಬ ಭಯ ಪಾಲಕರನ್ನು ಕಾಡತೊಡಗಿದೆ.
ವೃದ್ಧರು, ಗರ್ಭಿಣಿಯರು ಮತ್ತು ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಸಾಗಿಸಲು ರಸ್ತೆ ಇಲ್ಲದಂತಾಗಿದೆ. ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಬೆಳಗಲಿ ಗ್ರಾಮಕ್ಕೆ ಸಮರ್ಪಕ ರಸ್ತೆ ನಿರ್ಮಿಸಿಕೊಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಲ್ಲಪ್ಪ ಪಾಶ್ಚಾಪೂರೆ ಮಾತನಾಡಿ, ರಸ್ತೆಯ ಅಕ್ಕಪಕ್ಕದ ಜನರು ರಸ್ತೆ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡಿದ್ದಾರೆ. ಇದರಿಂದ ಬೆಳಗಲಿ ಗ್ರಾಮಸ್ಥರು ಮತ್ತು ತೋಟಪಟ್ಟಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರಸ್ತೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದರು.
ಬೆಳಗಲಿ ಗ್ರಾಮದ ರಸ್ತೆ ಬಂದ್ : ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತ ಮಾಡಿ ಪ್ರತಿಭಟನೆ ಎಚ್ಚರಿಕೆ ನೀಡಿದ ಗ್ರಾಮಸ್ಥರು - Belagavi district news
ಸಮರ್ಪಕವಾದ ರಸ್ತೆ ನಿರ್ಮಾಣ ಕಾರ್ಯಕ್ಕೆ ಬೇಡಿಕೆ ಇಟ್ಟಿರುವ ಬೆಳಗಲಿ ಗ್ರಾಮಸ್ಥರು ಒಂದು ವಾರದೊಳಗೆ ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.