ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಅವರು ಇಂದು ಮಧ್ಯಾಹ್ನ ಕೋಲ್ಕತ್ತಾಗೆ ತೆರಳುವುದನ್ನು ಮುಂದೂಡಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೊಮ್ಮೆ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಧನ್ಖರ್ ಅವರು ನಿನ್ನೆ ಶಾ ಅವರೊಂದಿಗೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ಚುನಾವಣಾ ನಂತರದ ಹಿಂಸಾಚಾರದ ಹಲವಾರು ಘಟನೆಗಳು ವರದಿಯಾಗಿರುವ ಬಗ್ಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಗೃಹ ಸಚಿವರಿಗೆ ವಿವರಿಸಿದ್ದಾರೆಂದು ತಿಳಿದು ಬಂದಿದೆ.
ಧಂಕರ್ ಇಂದು ಮಧ್ಯಾಹ್ನ ಕೋಲ್ಕತ್ತಾದಿಂದ ಹೊರಡಲು ನಿರ್ಧರಿಸಿದ್ದರು. ಆದರೆ, ನಿರ್ಗಮನವನ್ನು ಶನಿವಾರಕ್ಕೆ ಮುಂದೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಧಂಕರ್ ಮಂಗಳವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದರು. ಅವರು ಕೋಲ್ಕತ್ತಾದಿಂದ ನಿರ್ಗಮಿಸುವ ಒಂದು ದಿನ ಮೊದಲು, ಬಿಜೆಪಿ ಶಾಸಕರ ನಿಯೋಗವು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಮನವಿ ಸಲ್ಲಿಸಿತ್ತು.