ETV Bharat / briefs

ಕೊರೊನಾ ಕಷ್ಟದ ಸಮಯದಲ್ಲಿ ರಘು ದೀಕ್ಷಿತ್ ಭರವಸೆಯ ಹಾಡು! - Raghu deekshith Bharavaseya Baduku

ಫಾರ್ ರಿಜಿಸ್ಟ್ರೇಷನ್ ಚಿತ್ರದ ನಿರ್ದೇಶಕ ನವೀನ್ ದ್ವಾರಕಾನಾಥ್ ಆಲಾಪ್ ಕ್ರಿಯೇಷನ್ಸ್ ಪ್ರೊಡಕ್ಷನ್ ಹೌಸ್ ಅಡಿ ಭರವಸೆಯ ಬದುಕು ಎಂಬ ಶೀರ್ಷಿಕೆಯ ಈ ಗೀತೆ ಹೊರತಂದಿದ್ದಾರೆ. ಸಂಗೀತ ನಿರ್ದೇಶಕ ಹಾಗೂ ಗಾಯಕರಾದ ರಘು ದೀಕ್ಷಿತ್ ಹಾಗೂ ವಾರಿಜಶ್ರೀ ವೇಣುಗೋಪಾಲ್ ಈ ಹಾಡು ಹಾಡಿದ್ದಾರೆ.

Bharavaseya Baduku
Bharavaseya Baduku
author img

By

Published : Jun 9, 2021, 10:24 PM IST

'ಸಾಕು ಇನ್ನು ಸಾಕು ಬರಿ ದೋಷಣೆಯ ನಿಲ್ಲಿಸಿರಿ ಸಾಕು’ ಗೀತೆಯು ಜನಸಾಮಾನ್ಯರಲ್ಲಿ ಭರವಸೆ ಮೂಡಿಸಲು ಹಾಗೂ ಸಕಾರಾತ್ಮಕ ಮನದಾಳವನ್ನು ಹೊರಹೊಮ್ಮಿಸಲು ಹೊರಟಿದೆ. ಫಾರ್ ರಿಜಿಸ್ಟ್ರೇಷನ್ ಚಿತ್ರದ ನಿರ್ದೇಶಕ ನವೀನ್ ದ್ವಾರಕನಾಥ್ ಆಲಾಪ್ ಕ್ರಿಯೇಷನ್ಸ್ ಪ್ರೊಡಕ್ಷನ್ ಹೌಸ್ ಅಡಿ ಭರವಸೆಯ ಬದುಕು ಎಂಬ ಶೀರ್ಷಿಕೆಯ ಈ ಗೀತೆಯನ್ನು ಹೊರತಂದಿದ್ದಾರೆ.

ಸದ್ಯ ಈ ಭರವಸೆಯ ಬದುಕು ಎಂಬ ಹೆಸರಿನ ಹಾಡಿನಲ್ಲಿ, ಅನಿರುದ್ಧ ಜಟ್ಕರ್, ಪ್ರಥ್ವಿ ಅಂಬರ್, ಸಿಂಪಲ್ ಸುನಿ, ವಸಿಷ್ಠ ಸಿಂಹ, ಸೋನು ಗೌಡ, ನಾಗೇಂದ್ರ ಪ್ರಸಾದ್, ಪಿ.ಡಿ.ಸತೀಶ್ ಚಂದ್ರ, ಕೃಷಿ ತಾಪಂಡಾ, ಹರ್ಷಿಕಾ ಪೂಣಚ್ಛ, ರಂಜಿನಿ ರಾಘವನ್, ರಘು ರಾಮನಕೊಪ್ಪ, ರೆಮೋ, ಜೈ ರಾಮ್ ಕಾರ್ತಿಕ್, ಕಿಶನ್ ಬೆಳಗಲಿ, ನವೀನ್ ಶಂಕರ್, ಮಯೂರ ರಾಘವೇಂದ್ರ, ಆರ್.ಜೆ. ಸೌಜನ್ಯ, ವರ್ಷಿಣಿ ಜಾನಕೀರಾಮ್,ಆರ್ ಅಭಿಲಾಷ್, ಯಶ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ಸಂಗೀತ ನಿರ್ದೇಶಕ ಹಾಗೂ ಗಾಯಕರಾದ ರಘು ದೀಕ್ಷಿತ್ ಹಾಗೂ ವಾರಿಜಶ್ರೀ ವೇಣುಗೋಪಾಲ್ ಈ ಹಾಡನ್ನ ಹಾಡಿದ್ದಾರೆ. ಸಂಗೀತ ನಿರ್ದೇಶಕ ಹರೀಶ್ ಆರ್ .ಕೆ ಹಾಗೂ ಸಿದ್ಧಾರ್ಥ್ ಹಾಡಿನ ಸಂಯೋಜನೆ ಜೊತೆಗೆ, ಹರೀಶ್.ಆರ್.ಕೆ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಇನ್ನು ಮನು ಸೆಡ್‌ಗಾರ್ ವಿಡಿಯೋ ಸಂಕಲನ ಮಾಡಿದ್ದಾರೆ.

ಈಗಾಗಲೇ ಅದೆಷ್ಟೋ ಮನಸ್ಸುಗಳು ನಕಾರಾತ್ಮಕ ಆಲೋಚನೆಯಲ್ಲಿ ಭರವಸೆ ಕಳೆದುಕೊಂಡಿದ್ದು, ಮಾನಸಿಕ ಒತ್ತಡವನ್ನು ಅನುಭವಿಸುತ್ತಿದ್ದಾರೆ. ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯವು ಹದೆಗೆಟ್ಟಿರುವುದರಿಂದ ಜನರಲ್ಲಿನ ಆತ್ಮ ವಿಶ್ವಾಸ ಕುಂದುತ್ತಿದೆ. ಈ ನಿಟ್ಟಿನಲ್ಲಿ ಶ್ರೀ ಸಾಮಾನ್ಯರಲ್ಲಿ ಪಾಸಿಟಿವ್ ಆಲೋಚನೆ ಬೆಳೆಸಲು, ಆತ್ಮ ವಿಶ್ವಾಸ ತುಂಬಲು ಹಾಗೂ ಭರವಸೆ ಮೂಡಿಸಲೆಂದೇ ನಿರ್ದೇಶಕ ನವೀನ್ ದ್ವಾರಕಾನಾಥ್ ಈ ಹಾಡನ್ನ ನಿರ್ದೇಶನ ಮಾಡಿದ್ದಾರೆ. ಸದ್ಯ ಆನಂದ ಆಡಿಯೋ ಯೂಟ್ಯೂಬ್ ಚಾನಲ್​ನಲ್ಲಿ ಭರವಸೆ ಬದುಕು ಹಾಡು ರಿಲೀಸ್ ಆಗಿ ಗಮನ ಸೆಳೆಯುತ್ತಿದೆ‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.