ಮೈಸೂರು: ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಪೊಲೀಸ್ ಬ್ಯಾರಿಕೇಡ್‌ಗೆ ಗುದ್ದಿದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಎಸ್.ಕೆ.ಉಮೇಶ್ (33) ಮೃತ ಬೈಕ್ ಸವಾರ. ತಂಬಾಕು ಹರಾಜು ಮಾರುಕಟ್ಟೆಯಲ್ಲಿನ ಜಿ.ಪಿ.ಐ ಕಂಪನಿಯಲ್ಲಿ ಕೆಲಸ ಮುಗಿಸಿಕೊಂಡು ಸ್ವಗ್ರಾಮ ಅರಕಲಗೂಡು ತಾಲೂಕಿನ ಶಿವಹಳ್ಳಿಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಬೆಟ್ಟದಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ಮೃತ ವ್ಯಕ್ತಿಗೆ ಪತ್ನಿ ಹಾಗೂ 4 ವರ್ಷದ ಮಗನಿದ್ದಾನೆ ಎಂದು ತಿಳಿದುಬಂದಿದೆ.
ಪೊಲೀಸ್ ಬ್ಯಾರಿಕೇಡ್‌ಗೆ ಗುದ್ದಿದ ಬೈಕ್, ಸವಾರ ಸಾವು - ಮೈಸೂರು ಅಪಘಾತ ಸುದ್ದಿ
ಕೆಲಸ ಮುಗಿಸಿಕೊಂಡು ಬೈಕ್ ಮೂಲಕ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.