ಬೆಂಗಳೂರು: ಟ್ವೀಟರ್ ರಾಮಯ್ಯನವರೇ ನಿಮಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಿ ತೋರಿಸಿ ಎಂದು ಬಿಜೆಪಿ ಟ್ವೀಟ್ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದೆ.
ಮಾನ್ಯ ಟ್ವೀಟರ್ ರಾಮಯ್ಯನವರೇ ದಲಿತರ ಮೇಲಿರುವ ನಿಮ್ಮ ಪ್ರೀತಿಯನ್ನು ಕೇವಲ ಟ್ವೀಟರ್ ಮೂಲಕ ತೋರಿಸಬೇಡಿ. ಡಾ.ಜಿ.ಪರಮೇಶ್ವರ್ ಅವರು ದಲಿತರು ಎಂಬ ಕಾರಣಕ್ಕೆ ಸಿಎಂ ಸ್ಥಾನ ತಪ್ಪಿಸಿದ್ದು ತಾವೇ ಎಂದು ರಾಜ್ಯದ ಜನತೆಗೆ ಗೊತ್ತಿದೆ ಹೀಗೆಂದು ರಾಜ್ಯ ಬಿಜೆಪಿ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರ ಟ್ವೀಟ್ ಚಾಳಿಯನ್ನು ಟೀಕಿಸಿದೆ.
ದಲಿತರ ಮೇಲೆ ತಮಗೆ ನಿಜಕ್ಕೂ ಕಾಳಜಿ ಇದ್ದರೆ ಲೋಕಸಭಾ ಚುನಾವಣೆಯಲ್ಲಿ ಸೋತಿರುವ ನಿಮ್ಮ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸಿಎಂ ಮಾಡಿ ಎಂದು ಟ್ವೀಟ್ ಮೂಲಕ ಸವಾಲೆಸೆದಿದೆ.