ETV Bharat / briefs

ಕೊರೊನಾ ನಿಯಮ ಉಲ್ಲಂಘಿಸಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ಸಚಿವ ಶೆಟ್ಟರ್​ ಆಪ್ತ - ಸಚಿವ ಜಗದೀಶ್ ಶೆಟ್ಟರ್

ಸಚಿವ ಜಗದೀಶ್ ಶೆಟ್ಟರ್ ಆಪ್ತ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಸಾಹುಕಾರ್ ಎಂಬವರು ಕೋವಿಡ್​ ನಿಯಮ ಉಲ್ಲಂಘಿಸಿ ತಮ್ಮ ಮದುವೆ ವಾರ್ಷಿಕೋತ್ಸವವನ್ನು ಆಚರಣೆ ಮಾಡಿದ್ದಾರೆ.

Corona rules break
Corona rules break
author img

By

Published : May 20, 2021, 10:10 AM IST

ಹುಬ್ಬಳ್ಳಿ: ಬಿಜೆಪಿ ಮುಖಂಡ ಮತ್ತು ಸಚಿವ ಜಗದೀಶ್ ಶೆಟ್ಟರ್ ಆಪ್ತರೊಬ್ಬರು ತಮ್ಮ ಮದುವೆ ವಾರ್ಷಿಕೋತ್ಸವ ಆಚರಣೆ ಸಂದರ್ಭದಲ್ಲಿ ಕೋವಿಡ್​ ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ.

ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಸಾಹುಕಾರ್ ಅವರು 25ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಆದರೆ ಕಾರ್ಯಕ್ರಮದಲ್ಲಿ ಸಾಹುಕಾರ್ ದಂಪತಿ ಸೇರಿ ಹಲವರು ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರವನ್ನೂ ಪಾಲಿಸಿಲ್ಲ. ಕಾರ್ಯಕ್ರಮದ ಫೋಟೋಗಳು ವೈರಲ್​ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.

ಮೇ 18ರಿಂದ 24ರವರೆಗೂ ಯಾವುದೇ ಸಭೆ, ಸಮಾರಂಭ ಮಾಡಬಾರದೆಂದು ಧಾರವಾಡ ಜಿಲ್ಲಾಡಳಿತ ಆದೇಶ ನೀಡಿದೆ. ಮದುವೆಗೂ ನಿಷೇಧವನ್ನು ಹೇರಿದೆ. ಆದರೆ ಬಿಜೆಪಿ ಮುಖಂಡರು ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗರಾಜ್ ಕಲಬುರ್ಗಿ ಕೂಡ ಭಾಗಿಯಾಗಿದ್ದು, ಮಾಸ್ಕ್ ಧರಿಸಿಲ್ಲ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.