ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ವಿಭಾಗ ಮಟ್ಟದ ಸಭೆ ನಡೆಯಿತು.
ನಗರದ ತುಂಬೆ ಬಂಟರ ಭವನದಲ್ಲಿ ದ.ಕ, ಉಡುಪಿ, ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗ ಮಟ್ಟದ ಬಿಜೆಪಿ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಿಗೆ ಸಂಬಂಧಿಸಿದ ಶಾಸಕರು, ವಿಭಾಗ ಪ್ರಮುಖರು, ಜಿಲ್ಲಾಧ್ಯಕ್ಷರು, ಮಂಡಲಾಧ್ಯಕ್ಷರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.