ಬೆಂಗಳೂರು: ಬಿಬಿಎಂಪಿ ಉಪಚುನಾವಣೆಯಲ್ಲಿ ಜೆಡಿಎಸ್ ಕಾರ್ಯಕರ್ತರ ವರ್ತನೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸರ್ವಾಧಿಕಾರದ ದೋರಣೆಯನ್ನು ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.
ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್ ಅವರು ಬಿಜೆಪಿ ಕಾರ್ಯಕರ್ತರನ್ನ ಬೆದರಿಸುತ್ತಿದ್ದಾರೆ. ಬಿಬಿಎಂಪಿ ಕಾವೇರಿಪುರ ವಾರ್ಡ್ನ ಉಪಚುನಾವಣೆಯಲ್ಲಿ ಗೂಂಡಾಗಿರಿ ನಡೆಸಲಾಗುತ್ತಿದೆ. ಹೆಚ್.ಡಿ. ಕುಮಾರಸ್ವಾಮಿ ಅವರ ಸರ್ವಾಧಿಕಾರಿ ಆಡಳಿತದ ಪ್ರೇರಣೆಯಿಂದಾಗಿ ಗೂಂಡಾಗಿರಿ ನಡೆಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬಿಜೆಪಿ ಆರೋಪಿಸಿದೆ.