ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಭಾರಿ ಬಹುಮತಗಳ ಅಂತರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ನಗರದ ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಗೆಲುವಿಗೆ ಕಾರಣವಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಸತತವಾಗಿ ಪರಿಶ್ರಮಿಸಿ ಪ್ರಚಾರ ಕೈಗೊಂಡ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ ಅವರು, ಸ್ವತಂತ್ರ ಬಂದ ನಂತರದಲ್ಲಿ ಈ ಬಾರಿ ಅತಿ ಹೆಚ್ಚು ಮತದಾನ ಜಿಲ್ಲೆಯಲ್ಲಾಗಿತ್ತು. ಇಡೀ ದೇಶದಲ್ಲಿ ಮೋದಿ ಅವರ ನೇತೃತ್ವ ಬಯಸುತ್ತಿದೆ ಎಂದರು.
ಈ ಗೆಲುವು ಆಕಸ್ಮಿಕವಲ್ಲ ಸಂಘಟನೆಯ ಗೆಲುವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕಡೆ ಗಮನ ನೀಡಬೇಕು. ಹಲವು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸುತ್ತೇನೆ ಎಂದು ಭರವಸೆ ನೀಡಿದರು.