ಮಂಗಳೂರು: ಕಿರು ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಕಮರಿಗೆ ಉರುಳಿದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯದಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸಿರಿಬಾಗಿಲು ಗ್ರಾಮದ ಅನಿಲ ಎಂಬಲ್ಲಿ ಕಮರಿಗೆ ಉರುಳಿದೆ. ಕಾರಿನಲ್ಲಿದ್ದವರಲ್ಲಿ ಮಹಿಳೆ ಸಾವನ್ನಪ್ಪಿದ್ದರೆ, ಐವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.