ಚಿಕ್ಕಬಳ್ಳಾಪುರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರ ವಾಪಸಂದ್ರ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮೇಲ್ಸೇತುವೆಯಿಂದ ಉರುಳಿದೆ. ಘಟನೆಯಲ್ಲಿ ಚಾಲಕ ಸಾವಿಗೀಡಾಗಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಅತೀ ವೇಗವಾಗಿ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನೂ ಬಸ್ನಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಕ್ರೇನ್ ಮುಖಾಂತರ ಕಾರನ್ನು ಮೇಲೆತ್ತಿದ್ದಾರೆ.