ದಾವಣಗೆರೆ: ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಬಾಷಾನಗರದ ಸ್ಟಾಫ್ ನರ್ಸ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಮಹಿಳೆಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಾವಣಗೆರೆಯ ನಿಟುವಳ್ಳಿಯ ನಿವಾಸಿ ಮಂಜುಳಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ಟಾಫ್ ನರ್ಸ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ ಬರೆದು ಪೋಸ್ಟ್ ಮಾಡಿದ್ದರು ಎನ್ನಲಾಗುತ್ತಿದೆ.
ತನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಹಾಗೂ ಅವಹೇಳನಕಾರಿಯಾಗಿ ಸಂದೇಶ ಹರಿಬಿಡಲಾಗಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕ ನರ್ಸ್ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ತನಿಖೆ ಕೈಗೊಂಡು ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ.