ETV Bharat / briefs

ಕೋವಿಡ್ ನಿಯಮ ಉಲ್ಲಂಘಿಸಿದ ಇಬ್ಬರು ಖಾಸಗಿ ವೈದ್ಯರಿಗೆ ಚಾಮರಾಜನಗರ ಡಿಸಿ ನೋಟಿಸ್ - notice to Doctors

ಹನೂರು ತಾಲೂಕಿನ ಭಾರತಿ ನರ್ಸಿಂಗ್ ಹೋಂ ವೈದ್ಯ ಡಾ. ಪ್ರಕಾಶ್ ಹಾಗೂ ಸ್ನೇಹ ನರ್ಸಿಂಗ್ ಹೋಂನ ಡಾ. ಮಂಜುನಾಥ್ ಕೊರೊನಾ ನಿಯಮ ಪಾಲಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

ಚಾಮರಾಜನಗರ
ಚಾಮರಾಜನಗರ
author img

By

Published : May 26, 2021, 1:33 PM IST

ಚಾಮರಾಜನಗರ: ಕೋವಿಡ್ ನಿಯಮ, ಮಾರ್ಗಸೂಚಿ ಪಾಲಿಸದ ಹಾಗೂ ನರ್ಸಿಂಗ್ ಹೋಂಗೆ ಚಿಕಿತ್ಸೆಗಾಗಿ ಬಂದವರ ಐಎಲ್ಐ, ಸಾರಿ ಪ್ರಕರಣಗಳ ಪರಿಶೀಲನೆ ನಡೆಸಿ ಕೋವಿಡ್ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡದ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಎರಡು ನರ್ಸಿಂಗ್ ಹೋಂ ವೈದ್ಯರಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

ಹನೂರು ತಾಲೂಕಿನ ಭಾರತಿ ನರ್ಸಿಂಗ್ ಹೋಂ ವೈದ್ಯ ಡಾ. ಪ್ರಕಾಶ್ ಹಾಗೂ ಸ್ನೇಹ ನರ್ಸಿಂಗ್ ಹೋಂನ ಡಾ. ಮಂಜುನಾಥ್ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಈ ವೈದ್ಯರು ಕೋವಿಡ್-19 ನಿಯಮ ಮತ್ತು ಮಾರ್ಗಸೂಚಿ ಪ್ರಕಾರ ಕಾರ್ಯನಿರ್ವಹಿಸದೇ ಇರುವುದು, ಜೊತೆಗೆ ಆಸ್ಪತ್ರೆಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಸುತ್ತಿರಲಿಲ್ಲ ಎನ್ನಲಾಗಿದೆ.

ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ನಿಯಮ ಪಾಲಿಸುವಂತೆ ಸೂಚಿಸಿದ್ದರು. ಆದರೂ, ಕೋವಿಡ್ ನಿಯಮ ಪಾಲಿಸದಿದ್ದರಿಂದ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು, ಸೂಕ್ತ ಸಮಜಾಯಿಷಿ ಕೊಡದಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.