ಧಾರವಾಡ: ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಾಲ್ಯವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಯಶಸ್ವಿಯಾಗಿ ತಡೆಹಿಡಿದಿದೆ.
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಬೋಗುರು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಧಾರವಾಡ ತಾಲೂಕಿನ ಶಿಂಗನಹಳ್ಳಿ ಗ್ರಾಮದ ಯುವಕನೊಂದಿಗೆ ವಿವಾಹ ಮಾಡುತ್ತಿರುವ ಬಗ್ಗೆ ಅಧಿಕೃತ ಮೂಲಗಳಿಂದ ಬಂದ ಮಾಹಿತಿ ಮೇರೆಗೆ ಸ್ಥಳಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಹಾಗೂ ಅಂಗನವಾಡಿ ಕಾರ್ಯಕರ್ತೆಯರುಗಳ ತಂಡದೊಂದಿಗೆ ಭೇಟಿ ನೀಡಿ ಬಾಲ್ಯ ವಿವಾಹವನ್ನು ತಡೆ ಹಿಡಿದಿದ್ದಾರೆ.
ಅಪ್ರಾಪ್ತ ಬಾಲಕ, ಬಾಲಕಿಯರ ತಂದೆ, ತಾಯಿ ಹಾಗೂ ನೆರೆದ ಹಿರಿಯರಿಗೆ ಬಾಲ್ಯ ವಿವಾಹ ನಿಷೇಧ ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ-2016 ರ ಕುರಿತು ಮಾಹಿತಿ ತಿಳಿಸಿ ಜಾಗೃತಿ ಮೂಡಿಸಿದ್ದಾರೆ.
ಧಾರವಾಡ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ನಡೆಯುವ ಸಭೆಗೆ ಹಾಜರಾಗುವಂತೆ ಬಾಲಕಿ ಹಾಗೂ ಬಾಲಕಿಯ ಪಾಲಕರಿಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಲ್ಯ ವಿವಾಹಕ್ಕೆ ತಡೆ: ಬಾಲಕಿಯ ಪಾಲಕರಿಗೆ ನೋಟೀಸ್ - Dharwad child marriage
ಧಾರವಾಡ ಜಿಲ್ಲೆಯಲ್ಲಿ ಜರುಗುತ್ತಿದ್ದ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತಡೆಹಿಡಿದಿದೆ. ಅಲ್ಲದೆ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ನಡೆಯುವ ಸಭೆಗೆ ಹಾಜರಾಗುವಂತೆ ಬಾಲಕಿ ಹಾಗೂ ಬಾಲಕಿಯ ಪಾಲಕರಿಗೆ ನೋಟಿಸ್ ನೀಡಲಾಗಿದೆ.