ETV Bharat / briefs

ಜಿಲ್ಲೆಯ ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರವಹಿಸಿ.. ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು - District panchayath Grants

ಪ್ರಸಕ್ತ ವರ್ಷದ ಕಾಮಗಾರಿಗಳನ್ನು ನಿಗದಿತ ಟೈಮ್‌ನೊಳಗೆ ಮುಕ್ತಾಯಗೊಳಿಸಬೇಕು. ಯಾವುದೇ ಕಾರಣಕ್ಕೂ ವಷಾಂತ್ಯದವರೆಗೆ ಸಮಯ ವ್ಯಯಮಾಡಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

panchayath prasident shashikala statement on Grants

author img

By

Published : Jun 16, 2020, 5:16 PM IST

ಚಿತ್ರದುರ್ಗ : 2020-21ನೇ ಸಾಲಿನ ಅನುದಾನವನ್ನು ಯಾವುದೇ ಕಾರಣಕ್ಕೂ ಲ್ಯಾಪ್ಸ್ ಆಗಲು ಬಿಡುವುದಿಲ್ಲ. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಸೂಚನೆ ನೀಡಿದರು.

ಬರದನಾಡು ಎನಿಸಿರುವ ಜಿಲ್ಲೆಯ ಅನುದಾನ ಲ್ಯಾಪ್ಸ್ ಆದರೆ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ ಅವರು, ಅನುಮೋದನೆ ಪಡೆದ ನಂತರ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಪ್ರಸಕ್ತ ವರ್ಷದ ಕಾಮಗಾರಿಗಳನ್ನು ನಿಗದಿತ ಟೈಮ್‌ನೊಳಗೆ ಮುಕ್ತಾಯಗೊಳಿಸಬೇಕು. ಯಾವುದೇ ಕಾರಣಕ್ಕೂ ವಷಾಂತ್ಯದವರೆಗೆ ಸಮಯ ವ್ಯಯಮಾಡಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಮೊಬೈಲ್ ಸ್ವಿಚ್ ಆಫ್ ಮಾಡಬೇಡಿ : ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಹಾಗೂ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಜನಪ್ರತಿನಿಧಿಗಳು ಫೋನ್ ಮಾಡಿದಾಗ ಅಧಿಕಾರಿಗಳು ಸರಿಯಾಗಿ ಸ್ಪಂದಿಸಬೇಕು. ಸರ್ಕಾರ ನೀಡಿರುವ ಮೊಬೈಲ್ ಸಂಖ್ಯೆಗಳನ್ನು ಕಡ್ಡಾಯವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ಅಧಿಕಾರಿಗಳು ಮೊಬೈಲ್ ಸ್ವಿಚ್‌ ಆಫ್ ಮಾಡಿಕೊಳ್ಳಬಾರದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.