ಮಂಗಳೂರು: ನಗರದ ಧರ್ಮ ಪ್ರಾಂತ್ಯದ ಚರ್ಚ್ಗಳಲ್ಲಿ ಜೂ. 13ರಿಂದ ಸರ್ಕಾರದ ನಿಯಮಾವಳಿಗಳಂತೆ ಬಲಿ ಪೂಜೆ, ಪ್ರಾರ್ಥನೆ ನೆರವೇರಿಸಲಾಗುವುದು ಎಂದು ಧರ್ಮಾಧ್ಯಕ್ಷ ಅತಿ ವಂ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚರ್ಚ್ಗಳಲ್ಲಿ ಬಲಿ ಪೂಜೆಗಳನ್ನು ನೆರವೇರಿಸುವ ಕುರಿತಂತೆ ಸರ್ಕಾರ ಈಗಾಗಲೇ ಮಾರ್ಗದರ್ಶನ ನೀಡಿದ್ದು, ಅದರಂತೆ ಪೂರ್ವ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಕೋವಿಡ್-19 ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್, ಮಾಸ್ಕ್ಗಳನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಯಾ ಚರ್ಚ್ ಧರ್ಮಗುರುಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದಿದ್ದಾರೆ. ಈ ಕುರಿತು ಹೆಚ್ಚಿನ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ಧರ್ಮ ಪ್ರಾಂತ್ಯದ ಚರ್ಚ್ಗಳಲ್ಲಿ ಜೂ. 13ರಿಂದ ಪ್ರಾರ್ಥನೆ ಆರಂಭ - Mangalore latest news
ಮಂಗಳೂರು ಧರ್ಮ ಪ್ರಾಂತ್ಯದ ಚರ್ಚ್ಗಳಲ್ಲಿ ಜೂ. 13ರಿಂದ ಸರ್ಕಾರದ ನಿಯಮಾವಳಿಗಳಂತೆ ಬಲಿ ಪೂಜೆ, ಪ್ರಾರ್ಥನೆ ನೆರವೇರಿಸಲಾಗುವುದು ಎಂದು ಧರ್ಮಾಧ್ಯಕ್ಷ ಅತಿ ವಂ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.