ದುಬೈ: ಅಂತಾರಾಷ್ಟ್ರೀಯ ಪುರುಷರ ಕ್ರಿಕೆಟ್ ಪಂದ್ಯಕ್ಕೆ ಅಂಪೈರ್ ಆಗಿ ಕಾರ್ಯನಿರ್ವಹಿಸುವ ಮೂಲಕ ಕ್ಲೈರ್ ಪೊಲೊಸಾಕ್ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಪುರುಷರ ಕ್ರಿಕೆಟ್ಗೆ ಅಂಪೈರಿಂಗ್ ಮಾಡಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ವಿಶ್ವ ಕ್ರಿಕೆಟ್ ಲೀಗ್ನ ಡಿವಿಷನ್ 2- ಓಮನ್ ಮತ್ತು ನಮೀಬಿಯಾ ತಂಡಗಳ ನಡುವಿನ ಫೈನಲ್ ಪಂದ್ಯಕ್ಕೆ ಕ್ಲೈರ್ ಪೊಲೊಸಾಕ್ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದಾರೆ.
ಈಗಾಗಲೇ ಮಹಿಳಾ ಕ್ರಿಕೆಟ್ನಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿರುವ ಕ್ಲೈರ್, ಕಳೆದ ವರ್ಷ ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆದ ಟಿ-20 ವಿಶ್ವಕಪ್ನ ಸೆಮಿಫೈನಲ್ನಲ್ಲೂ ಅಂಪೈರ್ ಆಗಿದ್ದರು. ಜತೆಗೆ 2017ರಲ್ಲಿ ಆಸ್ಟ್ರೇಲಿಯಾದ ದೇಶೀಯ ಕ್ರಿಕೆಟ್ ಪಂದ್ಯಗಳಲ್ಲಿ ಅಂಪೈರ್ ಆಗಿಯೂ ಇವರು ಸೇವೆ ಸಲ್ಲಿಸಿದ್ದಾರೆ.