ETV Bharat / briefs

ಆಶಾ ಕಾರ್ಯಕರ್ತೆಯರೊಂದಿಗೆ ಸಿಎಂ ಸಂವಾದ: ಕೋವಿಡ್ ನಿರ್ವಹಣಾ ಕಾರ್ಯಕ್ಕೆ ಮೆಚ್ಚುಗೆ

ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಕೊಂಡಾಡಿದ ಸಿಎಂ, ಆಶಾ ಕಾರ್ಯಕರ್ತೆಯರ ಪರಿಶ್ರಮ ಹಾಗೂ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಗಮನಿಸಿ, ಕೋವಿಡ್ 19 ಎರಡನೇ ಅಲೆಯ ಪರಿಹಾರ ಪ್ಯಾಕೇಜ್ ಅಡಿ 3 ಸಾವಿರ ರೂ. ಸಹಾಯಧನ ಘೋಷಿಸಿರುವುದಾಗಿ ತಿಳಿಸಿದರು.

ಆಶಾ ಕಾರ್ಯಕರ್ತೆಯರೊಂದಿಗೆ ಸಿಎಂ ಸಂವಾದ
ಆಶಾ ಕಾರ್ಯಕರ್ತೆಯರೊಂದಿಗೆ ಸಿಎಂ ಸಂವಾದ
author img

By

Published : Jun 8, 2021, 5:09 PM IST

Updated : Jun 8, 2021, 6:49 PM IST

ಬೆಂಗಳೂರು: ಆಶಾ ಕಾರ್ಯಕರ್ತೆಯರು ಕೋವಿಡ್ 19 ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶ್ಲಾಘಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶಾ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸೇವೆಯನ್ನು ಕೊಂಡಾಡಿದ ಸಿಎಂ, ಆಶಾ ಕಾರ್ಯಕರ್ತೆಯರ ಪರಿಶ್ರಮ ಹಾಗೂ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಗಮನಿಸಿ, ಕೋವಿಡ್ 19 ಎರಡನೇ ಅಲೆಯ ಪರಿಹಾರ ಪ್ಯಾಕೇಜ್ ಅಡಿ 3 ಸಾವಿರ ರೂ. ಸಹಾಯಧನ ಘೋಷಿಸಿರುವುದಾಗಿ ತಿಳಿಸಿದರು. ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಅವರ ಆರೋಗ್ಯದ ಸ್ಥಿತಿ ಗತಿ, ಕಾರ್ಯ ನಿರ್ವಹಣೆ, ಅವರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ವಿವರ, ಸಾರ್ವಜನಿಕರು, ಮೇಲಾಧಿಕಾರಿಗಳ ಸಹಕಾರ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.

ತಮ್ಮ ತಮ್ಮ ಅನುಭವ ಹಂಚಿಕೊಂಡ ಆಶಾ ಕಾರ್ಯಕರ್ತೆಯರು

ಕೋವಿಡ್ ನಿರ್ವಹಣೆಯ ಸಂದರ್ಭದಲ್ಲಿ ಮೊದಲಿಗೆ ಸಾರ್ವಜನಿಕರು ಭಯಭೀತರಾಗಿದ್ದರು. ಪರೀಕ್ಷೆ ಮಾಡಿಸಲು, ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದರು. ಕೋವಿಡ್ ಸೋಂಕಿತರು ಕೋವಿಡ್ ಕೇರ್ ಸೆಂಟರ್​​​ಗಳಿಗೆ ದಾಖಲಾಗಲು ಭಯ ಪಡುತ್ತಿದ್ದರು. ಆದರೆ, ಇದೀಗ ಸಹಕರಿಸುತ್ತಿದ್ದಾರೆ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಲಸಿಕೆ ಹಾಕಿಸಲು ತಮ್ಮ ಗ್ರಾಮದ ಜನರ ಮನವೊಲಿಸಿ, ಮೇಲಧಿಕಾರಿಗಳ ಸಹಾಯದಿಂದ ವಾಹನ ವ್ಯವಸ್ಥೆ ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ದು ಲಸಿಕೆ ಹಾಕಿಸಿದ್ದನ್ನು ಸ್ಮರಿಸಿಕೊಂಡರು. ಕೋವಿಡ್ ಪೀಡಿತರಾಗಿದ್ದ ಶಿವಮೊಗ್ಗ ಜಿಲ್ಲೆ ಮುಂಬಾರಿನ ಶಾರದಾ ಕೆ.ವಿ. ಕೋವಿಡ್ ಕೇರ್ ಸೆಂಟರಿನಿಂದಲೇ ಸಂವಾದದಲ್ಲಿ ಪಾಲ್ಗೊಂಡರು. ಕಳೆದ 15 ದಿನಗಳವರೆಗೆ ತಮ್ಮ ಗ್ರಾಮ ಕೋವಿಡ್ ಮುಕ್ತವಾಗಿತ್ತು. ಇದೀಗ ಏಳು ಪ್ರಕರಣಗಳು ಕಂಡು ಬಂದಿವೆ. ಇಬ್ಬರು ಹೋಂ ಐಸೊಲೇಷನ್ನ​ಲ್ಲಿದ್ದು, ಉಳಿದವರು ಕೋವಿಡ್ ಕೇರ್ ಸೆಂಟರಿನಲ್ಲಿ ದಾಖಲಾಗಿದ್ದಾರೆ ಎಂದು ವಿವರಿಸಿದರು.

ಆಶಾ ಕಾರ್ಯಕರ್ತೆಯರೊಂದಿಗೆ ಸಿಎಂ ಸಂವಾದ: ಕೋವಿಡ್ ನಿರ್ವಹಣಾ ಕಾರ್ಯಕ್ಕೆ ಮೆಚ್ಚುಗೆ

ಜನರು ಲಸಿಕೆಯ ಸುರಕ್ಷತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ, ತಮ್ಮ ಪತಿಗೇ ಮೊದಲಿಗೆ ಲಸಿಕೆ ಕೊಡಿಸಿ, ಜನರಲ್ಲಿ ವಿಶ್ವಾಸ ಮೂಡಿಸಿದ ಅನುಭವವನ್ನು ರಾಮನಗರದ ಶಿವಲಿಂಗಮ್ಮ ಹಂಚಿಕೊಂಡರು. ವಿಜಯಪುರ ಜಿಲ್ಲೆಯ ದೀಪಾ ಬಜ್ಜನವರ ಕೋವಿಡ್ ಕೇರ್ ಸೆಂಟರಿಗೆ ದಾಖಲಾಗಲು ಜನರು ಹಿಂದೇಟು ಹಾಕಿದ ಅನುಭವ ವಿವರಿಸಿದರು. ಸಬ್ಬಮಂಗಲದ ರತ್ನಮ್ಮ ಅವರು, ಮನೆ ಮನೆಗೆ ಭೇಟಿ ನೀಡಿ, ಅರಿವು ಮೂಡಿಸುವುದರೊಂದಿಗೆ ಸೋಂಕಿತರಿಗೆ ಪೌಷ್ಟಿಕ ಆಹಾರ ಸೇವಿಸುವಂತೆ ಮನವರಿಕೆ ಮಾಡುತ್ತಿರುವುದಾಗಿ ತಿಳಿಸಿದರು. ಕೊಪ್ಪಳ ಜಿಲ್ಲೆ ನವಲಿ ಗ್ರಾಮದ ಲಕ್ಷ್ಮವ್ವ ನಾಯಕ್, ತಮ್ಮ ಗ್ರಾಮದಲ್ಲಿ 60 ವರ್ಷ ಮೇಲ್ಪಟ್ಟ 120 ಜನರಲ್ಲಿ 115 ಜನರಿಗೆ ಲಸಿಕೆ ಹಾಕಿಸಿರುವುದಾಗಿ ತಿಳಿಸಿದರು. ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಬಡಜನರ ಚಿಕಿತ್ಸೆಗೆ ದಾನಿಗಳಿಂದ ನೆರವು ದೊರಕಿಸುವ ಪ್ರಯತ್ನ ಮಾಡಿರುವುದನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಲಸಿಕೆ ಸುರಕ್ಷಿತ ಎಂದ ಸಚಿವ ಸುಧಾಕರ್​

ಸಂವಾದದ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಗ್ರಾಮಸ್ಥರಿಗೆ ಕೋವಿಡ್ ಲಸಿಕೆ ಸುರಕ್ಷಿತ ಎಂಬುದನ್ನು ಮನವರಿಕೆ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಬೇಕು. ಜೊತೆಗೆ, ಐಎಲ್ಐ, ಸಾರಿ ಪ್ರಕರಣಗಳು ಕಂಡುಬಂದಲ್ಲಿ ಅವರಿಗೆ ಕೂಡಲೇ ಪರೀಕ್ಷೆ ಮಾಡಿಸಿ, ಚಿಕಿತ್ಸೆ ಒದಗಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದರು.

ಧಾರವಾಡ ಜಿಲ್ಲೆ ಅಮ್ಮಿನಭಾವಿಯ ಪ್ರೇಮಾ ಪ್ರಕಾಶ್ ಕಬ್ಬೂರು, ದಕ್ಷಿಣ ಕನ್ನಡ ಜಿಲ್ಲೆ ಸುಲ್ಕೇರಿಯ ಹೇಮಲತಾ, ರಾಮನಗರ ಜಿಲ್ಲೆಯ ದೊಡ್ಡಗಂಗವಾಡಿಯ ಶಿವಲಿಂಗಮ್ಮ, ವಿಜಯಪುರ ಜಿಲ್ಲೆ ಕಂಬಾಗಿಯ ದೀಪಾ ಬಜ್ಜನವರ್, ಬೆಂಗಳೂರು ನಗರ ಜಿಲ್ಲೆ ಸಬ್ಬಮಂಗಲದ ರತ್ನಮ್ಮ, ಬಳ್ಳಾರಿ ಜಿಲ್ಲೆ ದಬ್ಬೂರಿನ ಪರಿಮಳಾ, ಶಿವಮೊಗ್ಗ ಜಿಲ್ಲೆ ಮುಂಬಾರಿನ ಶಾರದಾ ಕೆ.ವಿ., ಕೊಪ್ಪಳ ಜಿಲ್ಲೆ ನವಲಿಯ ಲಕ್ಷ್ಮವ್ವ ನಾಯಕ್, ರಾಯಚೂರು ಜಿಲ್ಲೆ ಗಣಮೂರಿನ ಇಂದಿರಾ, ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಮುಖ್ಯಮಂತ್ರಿಯವರೊಂದಿಗೆ ಸಂವಾದ ನಡೆಸಿದರು.

Last Updated : Jun 8, 2021, 6:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.