ETV Bharat / briefs

ಸಿಎಂ ಹೆಚ್​​ಡಿಕೆ ಮೀಟ್ಸ್​ ರಾಗಾ... ಮೈತ್ರಿ ಸರ್ಕಾರದ ಪರಿಸ್ಥಿತಿ ಕುರಿತು ಚರ್ಚೆ

ಮೈತ್ರಿಸರ್ಕಾರ ಪರಿಸ್ಥಿತಿಯನ್ನು ರಾಹುಲ್ ಗಾಂಧಿ ಅವರ ಅರಿವಿಗೆ ತಂದಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಭೇಟಿ ಬಳಿಕ ಹೇಳಿದ್ದಾರೆ.

ಸಿಎಂ ಹೆಚ್​​ಡಿಕೆ
author img

By

Published : May 30, 2019, 6:51 PM IST

ನವದೆಹಲಿ: ನರೇಂದ್ರ ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ರಾಹುಲ್ ಭೇಟಿ ಬಗ್ಗೆ ಮಾತನಾಡಿದ ಸಿಎಂ ಕುಮಾಸ್ವಾಮಿ

ರಾಗಾ ಭೇಟಿ ಬಳಿಕ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಿಎಂ ಹೆಚ್​​ಡಿಕೆ, ಪ್ರಧಾನಿ ಕಾರ್ಯಾಲಯದ ಆಹ್ವಾನದ ಮೇರೆಗೆ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದೇನೆ. ಸದ್ಯದ ಮೈತ್ರಿಸರ್ಕಾರ ಪರಿಸ್ಥಿತಿಯನ್ನು ರಾಹುಲ್ ಅವರ ಅರಿವಿಗೆ ತಂದಿದ್ದೇನೆ ಎಂದಿದ್ದಾರೆ. ಮುಂದಿನ ಕಾರ್ಯ ಯೋಜನೆಯ ಬಗ್ಗೆಯೂ ಚರ್ಚಿಸಿದ್ದಾಗಿ ಸಿಎಂ ಹೇಳಿದ್ದಾರೆ.

CM
ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಬಂಡೆಪ್ಪ ಕಾಶಂಪೂರ,ಸಾ.ರಾ.ಮಹೇಶ್

ರಾಜೀನಾಮೆಯ ಕುರಿತಂತೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ರಾಜೀನಾಮೆ ನೀಡದಂತೆ ರಾಹುಲ್ ಅವರ ಬಳಿ ಮನವಿ ಮಾಡಿದ್ದೇನೆ ಎಂದರು. ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಬೆಂಗಳೂರಿಗೆ ಇಂದೇ ತೆರಳುವುದಾಗಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ಸಚಿವರಾದ ಬಂಡೆಪ್ಪ ಕಾಶಂಪೂರ ಹಾಗೂ ಸಾ.ರಾ.ಮಹೇಶ್ ಉಪಸ್ಥಿತರಿದ್ದರು.

Intro:Body:

ಸಿಎಂ ಹೆಚ್​​ಡಿಕೆ ಮೀಟ್ಸ್​ ರಾಗಾ... ಮೈತ್ರಿ ಸರ್ಕಾರದ ಪರಿಸ್ಥಿತಿ ಕುರಿತಂತೆ ಮಾತುಕತೆ

ನವದೆಹಲಿ: ನರೇಂದ್ರ ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ರಾಗಾ ಭೇಟಿ ಬಳಿಕ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಿಎಂ ಹೆಚ್​​ಡಿಕೆ, ಪ್ರಧಾನಿ ಕಾರ್ಯಾಲಯದ ಆಹ್ವಾನದ ಮೇರೆಗೆ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದೇನೆ. ಸದ್ಯದ ಕರ್ನಾಟಕ ಸರ್ಕಾರ ಪರಿಸ್ಥಿತಿಯನ್ನು ರಾಹುಲ್ ಅವರ ಅರಿವಿಗೆ ತಂದಿದ್ದೇನೆ ಎಂದಿದ್ದಾರೆ. ಮುಂದಿನ ಕಾರ್ಯ ಯೋಜನೆಯ ಬಗ್ಗೆಯೂ ಚರ್ಚಿಸಿದ್ದಾಗಿ ಸಿಎಂ ಹೇಳಿದ್ದಾರೆ.

ರಾಜೀನಾಮೆಯ ಕುರಿತಂತೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ರಾಜೀನಾಮೆ ನೀಡದಂತೆ ರಾಹುಲ್ ಅವರ ಬಳಿ ಮನವಿ ಮಾಡಿದ್ದೇನೆ ಎಂದರು. ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಬೆಂಗಳೂರಿಗೆ ಇಂದೇ ತೆರಳುವುದಾಗಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.