ಬೆಂಗಳೂರು: ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರಕ್ಕೆ ಅಪಾಯ ಬರುವ ಮುನ್ಸೂಚನೆ ಹಿನ್ನೆಲೆಯಲ್ಲಿ ದೋಸ್ತಿ ಪಕ್ಷಗಳ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಂಬಂಧ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ನೇರವಾಗಿ ಶಾಸಕರೊಂದಿಗೆ ಮಾತನಾಡಲು ಸಭೆ ಕರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ ಡಿಎ ಸರ್ಕಾರ ರಚನೆಯಾದರೆ ರಾಜ್ಯದಲ್ಲಿನ ಮೈತ್ರಿ ಸರ್ಕಾರಕ್ಕೆ ಅಪಾಯ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮುಂದಿನವಾರ ಶಾಸಕರೊಂದಿಗೆ ಸಭೆ ಕರೆಯಲಾಗಿದೆ ಎನ್ನಲಾಗುತ್ತಿದೆ.
ಕ್ಷೇತ್ರಗಳ ಅಭಿವೃದ್ಧಿಗೆ ಸಿಎಂ ಸ್ಪಂದಿಸುವುದಿಲ್ಲ. ಕಾಂಗ್ರೆಸ್ ಶಾಸಕರು ಭೇಟಿಯಾದರೆ ಅವರ ಅಹವಾಲು ಕೇಳಿಸಿಕೊಳ್ಳುವುದಿಲ್ಲ ಎಂಬ ಆರೋಪ ಕೇಳಿ ಬರತ್ತಿದ್ದು. ಕಾಂಗ್ರೆಸ್ನಲ್ಲಿ ಸಮಾನ ಮನಸ್ಕ ಶಾಸಕರ ಕೂಟ ರಚನೆಯಾಗಿದೆ ಎನ್ನಲಾಗುತ್ತಿದೆ.